ETV Bharat / state

ಬೆಳಗಾವಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿ: ಐವರು ಪ್ರಯಾಣಿಕರಿಗೆ ಗಾಯ - ಸಾರಿಗೆ ಇಲಾಖೆ ಬಸ್

ಬೆಳಗಾವಿ ತಾಲೂಕಿನ ಬಡೇಕೊಳ್ಳಿಮಠ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್​​ ಅಪಘಾತ ಸಂಭವಿಸಿದೆ. ಬಸ್​ನಲ್ಲಿ 35 ಜನ ಪ್ರಯಾಣಿಕರಿದ್ದರು.

ksrtc-bus-accident-near-belagavi
ಬೆಳಗಾವಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿ: ಐವರು ಪ್ರಯಾಣಿಕರಿಗೆ ಗಾಯ
author img

By

Published : Aug 7, 2022, 5:07 PM IST

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಇಲಾಖೆ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ತಾಲೂಕಿನ ಬಡೇಕೊಳ್ಳಿಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಬಸ್​​ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ‌ ಪಾರಾಗಿದ್ದಾರೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದೆ. ಮಳೆಯಿಂದ ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೇ ಅವಘಡ ಸಂಭವಿಸಿರುವ ಸಾಧ್ಯತೆ ಇದೆ. ಬೆಳಗಾವಿಯಿಂದ ಹಾವೇರಿ ಜಿಲ್ಲೆಯ ಹಿರೇಕೆರೂರಿಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಇದಾಗಿದೆ. ಬಸ್​ನಲ್ಲಿ 35 ಜನ ಪ್ರಯಾಣಿಕರಿದ್ದರು. ಇದರಲ್ಲಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಭಾರಿ ಮಳೆ.. ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋಗಿ ವೃದ್ಧ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.