ETV Bharat / state

ಕೆಎಸ್​ಆರ್​ಟಿಸಿ ಬಸ್ ಪಲ್ಟಿ: ಕಂಡಕ್ಟರ್, ಪ್ರಯಾಣಿಕರಿಗೆ ಗಾಯ.. ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವೆ ಹೆಬ್ಬಾಳ್ಕರ್​

author img

By ETV Bharat Karnataka Team

Published : Sep 16, 2023, 1:04 PM IST

Updated : Sep 16, 2023, 2:04 PM IST

ಅಪಘಾತದಲ್ಲಿ ಬಸ್​ ನಿರ್ವಾಹಕಿ ಹಾಗೂ ವಿದ್ಯಾರ್ಥಿನಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.

Minister Hebbalkar visited hospital
ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವೆ ಹೆಬ್ಬಾಳ್ಕರ್​
ಕೆಎಸ್​ಆರ್​ಟಿಸಿ ಬಸ್ ಪಲ್ಟಿ: ಕಂಡಕ್ಟರ್, ಪ್ರಯಾಣಿಕರಿಗೆ ಗಾಯ.

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್​ಟಿಸಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದವರ ಆರೋಗ್ಯವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಿಸಿ, ಎಲ್ಲರಿಗೂ ಧೈರ್ಯ ತುಂಬಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ಕೂಡಾ ನೀಡಿದ್ದಾರೆ. ಅಪಘಾತವಾದ ವಿಷಯ ತಿಳಿದ ಕೂಡಲೇ ಸಚಿವೆ ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ.

ಏನಿದು ಘಟನೆ?: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾದ ಪರಿಣಾಮ ನಿರ್ವಾಹಕಿ, ಚಾಲಕ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳಗಾವಿ ತಾಲೂಕಿನ ಹಲಗಾ ಬಳಿ, ಸುವರ್ಣವಿಧಾನಸೌಧ ಮುಂಭಾಗದಲ್ಲಿ ನಡೆದಿದೆ. ಸಾರಿಗೆ ಸಂಸ್ಥೆಯ ನಗರ ಘಟಕಕ್ಕೆ ಸೇರಿದ ಬಸ್ ಇದಾಗಿದ್ದು, ನಗರ ಬಸ್ ನಿಲ್ದಾಣದಿಂದ ಕೆ.ಕೆ.ಕೊಪ್ಪಕ್ಕೆ ಹೊರಟಿತ್ತು. ಮಾರ್ಗಮಧ್ಯೆ ಬೆಳಗ್ಗೆ 8.30ರ ಸುಮಾರಿಗೆ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಗ್ಗಿನಲ್ಲಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶಗಮನಟ್ಟಿ ಗ್ರಾಮದ ವಿದ್ಯಾರ್ಥಿನಿ ಸಹನಾ ಹನುಮಂತ ಚೌಗಲೆ, ಬಸ್ ನಿರ್ವಾಹಕಿ ಶೋಭಾ ಗಾಣಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಾಲಕ ಕೆ ಕೆ ಕೊಪ್ಪ ಗ್ರಾಮದ ರಾಯಪ್ಪ ಸಣ್ಣಪ್ಪ ಬಡಸ್‌, ಕರವಿನಕೊಪ್ಪ ಗ್ರಾಮದ ಗಂಗವ್ವ ಚಂದ್ರಪ್ಪ ಹಂಚಿನಮನಿ, ರಾಜಶ್ರೀ ಸಂತೋಷ ದಾಮನೇಕರ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬಸ್​ನಲ್ಲಿ 6 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭೀಕರ ಅಪಘಾತ ಐವರು ಸ್ಥಳದಲ್ಲೇ ಸಾವು: ತಿರುಪತಿ ಪ್ರವಾಸ ಕೈಗೊಂಡಿದ್ದ ಕುಟುಂಬ ಪ್ರಯಾಣಿಸುತ್ತಿದ್ದ ಕ್ರೂಸರ್​ ವಾಹನವೊಂದು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕೆವಿಪಲ್ಲಿ ತಾಲೂಕಿಮ ಮಠಂಪಲ್ಲಿ ಎಂಬಲ್ಲಿ ರಸ್ತೆ ಅಪಘಾತಗೊಂಡ ಘಟನೆ ಇತ್ತೀಚೆಗೆ ನಡೆದಿತ್ತು. ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಜನ ಗಾಯಗೊಂಡಿದ್ದರು. ಬೆಳಗಾವಿ ಜಿಲ್ಲೆಯ ನಿವಾಸಿಗಳಾದ 16 ಮಂದಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ತಮ್ಮ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದರು. ವಾಹನದಲ್ಲಿ ಮಕ್ಕಳು ಮಹಿಳೆಯರು ಸೇರಿ 16 ಮಂದಿ ಪ್ರಯಾಣಿಸುತ್ತಿದ್ದರು. ಮುಂಜಾನೆ ನಸುಕಿನ ಜಾವ ಅಪಘಾತ ಸಂಭವಿಸಿತ್ತು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡಿದ್ದರು. ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಗಾಯಗೊಂಡವರಲ್ಲಿ ಕೆಲವರ ಪರಿಸ್ಥಿತಿ ಚಿಂತಾಜನಕವಾಗಿತ್ತು.

ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ತಿರುಪತಿಗೆ ತೆರಳಿದ್ದ ಬೆಳಗಾವಿಯ ತಾಯಿ-ಮಗಳು ಸೇರಿ ಐವರು ಸಾವು

Last Updated : Sep 16, 2023, 2:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.