ETV Bharat / state

ಲಖನ್ ಬಿಜೆಪಿಯ 2ನೇ ಅಭ್ಯರ್ಥಿಯಾಗಲಿ; ಸಹೋದರನ ಪರ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ - ಲಖನ್ ಜಾರಕಿಹೊಳಿ

ಗೋಕಾಕ ನಗರದ ಹೊರವಲಯದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಲಖನ್ ಜಾರಕಿಹೊಳಿ ಅವರಿಗೆ ಸ್ಪರ್ಧಿಸಲು ಪಕ್ಷವು ಅವಕಾಶ ಕಲ್ಪಿಸಿಕೊಟ್ಟಲ್ಲಿ ಬಿಜೆಪಿಯಿಂದ ಇಬ್ಬರೂ ಅಭ್ಯರ್ಥಿಗಳು ಪರಿಷತ್‍ಗೆ ಆಯ್ಕೆಯಾಗಲಿದ್ದಾರೆ ಎಂದು ಹೇಳಿದರು.

Balachandra Jarkiholi
ಬಾಲಚಂದ್ರ ಜಾರಕಿಹೊಳಿ
author img

By

Published : Nov 14, 2021, 4:01 AM IST

ಬೆಳಗಾವಿ: ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್(KMF) ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ(Balachandra Jarkiholi) ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು.

ಗೋಕಾಕ ನಗರದ ಹೊರವಲಯದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಲಖನ್ ಜಾರಕಿಹೊಳಿ ಅವರಿಗೆ ಸ್ಪರ್ಧಿಸಲು ಪಕ್ಷವು ಅವಕಾಶ ಕಲ್ಪಿಸಿಕೊಟ್ಟಲ್ಲಿ ಬಿಜೆಪಿಯಿಂದ ಇಬ್ಬರೂ ಅಭ್ಯರ್ಥಿಗಳು ಪರಿಷತ್‍ಗೆ ಆಯ್ಕೆಯಾಗಲಿದ್ದಾರೆ ಎಂದು ಹೇಳಿದರು.

ಕಳೆದ 2019 ರಲ್ಲಿ ಜರುಗಿದ ವಿಧಾನಸಭಾ ಉಪಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರು ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ನಂತರ ಬದಲಾದ ಸ್ಥಿತಿಯಲ್ಲಿ ಅವರು ಬಿಜೆಪಿಯೊಂದಿಗೆ ಗುರುತಿಸಿಕೊಂಡು ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರ ಪ್ರಚಾರ ಕೈಗೊಂಡು ಅಂಗಡಿಯವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಬಿಜೆಪಿಯ ಮೊದಲನೇ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾದಂತಾಗಿದೆ. ಲಖನ್ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಪಕ್ಷವು ಘೋಷಿಸಿದರೆ ನಿಶ್ಚಿತವಾಗಿಯೂ ಎರಡೂ ಸ್ಥಾನಗಳು ಬಿಜೆಪಿ ಮಡಿಲಿಗೆ ಬೀಳಲಿವೆ. ಇದಕ್ಕೆ ಪಕ್ಷದ ಮುಖಂಡರು ಅವಕಾಶ ಮಾಡಿ ಕೊಡಬೇಕು. ಅಲ್ಲದೇ ಲಖನ್ ಅವರು ಜಿಲ್ಲೆಯಲ್ಲಿ ತಮ್ಮದೇ ಆದ ಕಾರ್ಯಕರ್ತರ ಪಡೆಯ ಜೊತೆಗೆ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನೆಲ್ಲ ಗಮನಿಸಿ ಲಖನ್ ಅವರನ್ನು ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಲು ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು.

ಇದನ್ನು ಓದಿ:ಪರಿಷತ್ ಚುನಾವಣೆ: ಕಾಂಗ್ರೆಸ್​ ಟಿಕೆಟ್​ಗಾಗಿ ಬೆಳಗಾವಿಯಲ್ಲಿ 7 ಆಕಾಂಕ್ಷಿಗಳ ಮಧ್ಯೆ ಫೈಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.