ETV Bharat / state

ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿ ಶುಭ ಕೋರಿದ ಲಕ್ಷ್ಮಿ ತಾಯಿ ಫೌಂಡೇಶನ್ - ಬೆಳಗಾವಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ನಗರದ ಪರೀಕ್ಷಾ ಕೇಂದ್ರಗಳಲ್ಲಿ ಲಕ್ಷ್ಮಿ ತಾಯಿ ಫೌಂಡೇಶನ್​​​​​​​ನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಸ್ಕ್​ ವಿತರಿಸಲಾಯಿತು.

Mask distribution
Mask distribution
author img

By

Published : Jun 25, 2020, 12:23 PM IST

ಬೆಳಗಾವಿ: ಎಸ್ಎಸ್ಎಲ್​​​​​​ಸಿ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಮಾಸ್ಕ್ ವಿತರಿಸುವ ಮೂಲಕ ಲಕ್ಷ್ಮಿ ತಾಯಿ ಫೌಂಡೇಶನ್​​​ನಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಶುಭ ಕೋರಲಾಯಿತು.

ಬೆಳಗ್ಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದಂತೆ ಲಕ್ಷ್ಮಿ ತಾಯಿ ಫೌಂಡೇಶನ್ ಕಾರ್ಯಕರ್ತರು ವಿದ್ಯಾರ್ಥಿಗಳನ್ನು ನಗುಮೊಗದಿಂದ ಸ್ವಾಗತಿಸಿ, ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಿರಿ. ಎಲ್ಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಹೇಳಿ ಮಾಸ್ಕ್ ಗಳನ್ನು ವಿತರಿಸಿದರು.

ವಿದ್ಯಾರ್ಥಿಗಳ ಪಾಲಕರಿಗೂ ಮಾಸ್ಕ್​​ಗಳನ್ನ ನೀಡಲಾಯಿತು. ಮಹಾಮಾರಿ ಕೊರೊನಾ ಅಟ್ಟಹಾಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಆತಂಕದಲ್ಲಿದ್ದು, ಆದಷ್ಟು ಬೇಗ ಭಗವಂತ ಎಲ್ಲರ ಆತಂಕವನ್ನು ದೂರಾಗಿಸಲಿ ಎಂದು ಪ್ರಾರ್ಥಿಸಿ, ಎಲ್ಲರ ಬದುಕು ಉಜ್ವಲವಾಗಲಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾರೈಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.