ETV Bharat / state

ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ನೇಮಕ: ಡಿಕೆಶಿ ಆದೇಶ

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಡಿಕೆಶಿ ಸೂಚಿಸಿದ್ದಾರೆ.

Lakshmi Hebbalkar appointed KPCC spokesperson
ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇಮಕ; ಡಿಕೆಶಿ ಆದೇಶ
author img

By

Published : Sep 22, 2020, 1:01 PM IST

Updated : Sep 22, 2020, 1:24 PM IST

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ.

ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಲಕ್ಷ್ಮಿ ಹೆಬ್ಬಾಳ್ಕರ್​ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಡಿಕೆಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದ್ದಾರೆ.

Last Updated : Sep 22, 2020, 1:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.