ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಪ್ರವೇಶಕ್ಕೆ ನಡೆಯಲಿರುವ ಪರಿಷತ್ ಚುನಾವಣೆಯಲ್ಲಿ(Council Election) ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತವಾಗಿದೆ. ಒಂದೇ ಸ್ಥಾನಕ್ಕೆ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧರಿಸಿದ್ದು, ಚನ್ನರಾಜ್ ಹೆಸರನ್ನು ಘೋಷಿಸುವುದೊಂದೆ ಬಾಕಿ ಇದೆ.
ಭಾನುವಾರ ಬೆಂಗಳೂರಿನಲ್ಲಿ ಕೆಪಿಸಿಸಿ(KPCC) ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ನಡೆದ ಕೈ ನಾಯಕರ ಸಭೆಯಲ್ಲಿ ಚನ್ನರಾಜ ಹಟ್ಟಿಹೊಳಿ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ದೆಹಲಿಯಲ್ಲಿ ಬೀಡುಬಿಟ್ಟಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್(MLA Lakshmi hebbalkar) ಅವರು ಸಹೋದರನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚನ್ನರಾಜ ಹಟ್ಟಿಹೊಳಿ ಫೋಟೋ ವಾಟ್ಸ್ಆ್ಯಪ್ ಸ್ಟೇಟಸ್ ಇಟ್ಟುಕೊಂಡಿರುವ ಶಾಸಕಿ 'ಕಾಂಗ್ರೆಸ್ (Congress) ಪಕ್ಷದ ಪ್ರಬಲ ಆಕಾಂಕ್ಷಿ, ಯುವ ನಾಯಕ', 'ಚನ್ನರಾಜ ಹಟ್ಟಿಹೊಳಿ ನಮ್ಮ ಸಹೋದರ ನಮ್ಮ ಹೆಮ್ಮೆ', 'ವಿಧಾನಪರಿಷತ್ ಆಯ್ಕೆಗೆ ಯೋಗ್ಯ ಅಭ್ಯರ್ಥಿ' ಎಂದು ಬರೆದುಕೊಂಡಿದ್ದಾರೆ.
ಕಳೆದ ಆರು ತಿಂಗಳಿಂದ ಚನ್ನರಾಜ್ ಚುನಾವಣೆ ಸಿದ್ಧತೆ ನಡೆಸುತ್ತಿದ್ದಾರೆ. ಕೈ ಟಿಕೆಟ್ ಬಯಸಿ 8 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಹಾಲಿ ಪಕ್ಷೇತರ ಎಂಎಲ್‌ಸಿ ವಿವೇಕರಾವ್ ಪಾಟೀಲ್, ಕಾಂಗ್ರೆಸ್ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ(Prakash hukkeri), ಮಾಜಿ ಎಂಎಲ್‌ಸಿ ವೀರಕುಮಾರ್ ಪಾಟೀಲ್, ಚನ್ನರಾಜ್ ಸೇರಿ 8 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮನುಷ್ಯರಷ್ಟೇ ಅಲ್ಲ ಕತ್ತೆ - ಕುದುರೆ ಕೂಡ ಬರಬಹುದು!