ಚಿಕ್ಕೋಡಿ(ಬೆಳಗಾವಿ): ಎರಡು ದಿನಗಳ ಹಿಂದಷ್ಟೇ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸಹೋದರನಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಇದೀಗ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ರಾಜು ಕಾಗೆ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಾಗವಾಡ ಪಟ್ಟಣದಲ್ಲಿರುವ ಮಾಜಿ ಶಾಸಕ, ಕಾಂಗ್ರೆಸ್ನ ಹಿರಿಯ ಮುಖಂಡ ರಾಜು ಕಾಗೆ ಅವರ ಮನೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಸಹೋದರ ಚೆನ್ನರಾಜ ಹಟ್ಟಿಹೊಳಿ ಮೊದಲ ಬಾರಿಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಸಹೋದರನಿಗೆ ಪರಿಷತ್ ಚುನಾವಣೆಯಲ್ಲಿ ಬೆಂಬಲವಾಗಿ ನಿಲ್ಲುವಂತೆ ರಾಜು ಕಾಗೆ ಅವರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಕಲಬುರಗಿಯ ಲೂಟಿ ಗ್ಯಾಂಗ್ ಖರ್ಗೆ ದುಕಾನ್ ಬಂದ್ ಆಗಲಿದೆ: ನಳಿನ್ ಕುಮಾರ್ ಕಟೀಲ್