ಚಿಕ್ಕೋಡಿ: ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಆಯೋಜಿಸಿದ್ದ ಪರಿಷತ್ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಅವರು ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದರು.
ರಮೇಶ್ ಜಾರಕಿಹೊಳಿ ಥೂ..ಥೂ ಎಂದ ವಿಚಾರದ ಕುರಿತು ಮಾತನಾಡಿದ ಅವರು, ನಾನು ಚುನಾವಣೆ ಮೂಡಿನಲ್ಲಿ ಇದ್ದೇನೆ. ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
ಮತದಾರರು ತುಂಬಾ ಬುದ್ದಿವಂತರಿದ್ದಾರೆ. ಎಲ್ಲವನ್ನ ಗಮನಿಸುತ್ತಿದ್ದಾರೆ. ಅವರು ಏನ್ ಮಾತನಾಡಿದ್ದಾರೆ ಅನ್ನೋದನ್ನು ನೋಡಾಕೂ ನಾನು ಹೋಗಿಲ್ಲ. ಅದನ್ನು ಕೇಳೋಕೆ ನನ್ನ ಬಳಿ ಪುರಸೊತ್ತಿಲ್ಲ ಎಂದಿದ್ದಾರೆ.
ಬಿಜೆಪಿ ಕೇವಲ ಭರವಸೆ ನೀಡುವ ಪಕ್ಷ : ಸತೀಶ್ ಜಾರಕಿಹೊಳಿ
ಭಾರತೀಯ ಜನತಾ ಪಾರ್ಟಿ ಕೇವಲ ಭರವಸೆ ನೀಡುವ ಪಕ್ಷವಾಗಿದ್ದು, ನೀಡಿದ ಒಂದೇ ಒಂದು ಭರವಸೆಯೂ ಕೂಡ ಈಡೇರಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನ ಪ್ರತಿನಿಧಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಕೋಟಿ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದ ಬಿಜೆಪಿ ಕೋಟ್ಯಂತರ ಜನರ ಉದ್ಯೋಗ ಕಸಿದುಕೊಂಡಿದೆ. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ ಎಂದು ಕಿಡಿಕಾರಿದರು.
ಇದೇ ಸಮಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಹಲವರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಹುಕ್ಕೇರಿಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನ ಪ್ರತಿನಿಧಿಗಳು, ಹುಕ್ಕೇರಿಯ ಎಲ್ಲ ಕಾಂಗ್ರೆಸ್ ಮುಖಂಡರು, ಮಾಜಿ ಸಚಿವರಾದ ಎ.ಬಿ. ಪಾಟೀಲರು, ವೀರಕುಮಾರ ಪಾಟೀಲ, ಪ್ರಕಾಶ ಹುಕ್ಕೇರಿ ಇದ್ದರು.
ಇದನ್ನೂ ಓದಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳುತ್ತಿದ್ದಂತೆ ಥೂ.. ಥೂ.. ಎಂದು ಗೇಲಿ ಮಾಡಿದ ರಮೇಶ್ ಜಾರಕಿಹೊಳಿ