ETV Bharat / state

ಗೋವಾ ಬಿಜೆಪಿ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡಿದೆ: ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ

ಕೋವಿಡ್ ವೇಳೆ ಗೋವಾ ಸರ್ಕಾರ ಕನ್ನಡಿಗರಿಗೆ ಮಾಡಿದ ಅನ್ಯಾಯ ಬೇರೆ ಯಾರಿಗೂ ಆಗಿಲ್ಲ. ಗಡಿಗಳು ಬಂದ್ ಆಗಿ ಕನ್ನಡಿಗರು ಪಡಬಾರದ ಕಷ್ಟ ಪಟ್ಟಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೋವಾ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್
author img

By

Published : Feb 1, 2022, 9:56 AM IST

ಬೆಳಗಾವಿ: ಕೋವಿಡ್ ಸಮಯದಲ್ಲಿ ಗೋವಾದಲ್ಲಿರುವ ಕನ್ನಡಿಗರಿಗೆ ಆದಷ್ಟು ಅನ್ಯಾಯ ಬೇರೆ ಯಾರಿಗೂ ಆಗಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೋವಾ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗೋವಾದ ಪಣಜಿಯಲ್ಲಿ ಮಾತನಾಡಿದ ಅವರು, ಗೋವಾ ಬಿಜೆಪಿ ಸರ್ಕಾರದಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ಗೋವಾದಲ್ಲಿ ಕನ್ನಡಿಗರು ಲೇಬರ್ ಕ್ಲಾಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಕಟ್ಟಡ ಕಾರ್ಮಿಕರು, ಎಲೆಕ್ಟ್ರಿಷಿಯನ್, ಪಂಚರ್ ತಗೆಯುವ ಕೆಲಸಗಾರರು ಇಲ್ಲಿ ನೆಲೆಸಿದ್ದಾರೆ. ಹೊಟ್ಟೆಪಾಡಿಗಾಗಿ ಕನ್ನಡಿಗರು ಇಲ್ಲಿಗೆ ಬಂದಿದ್ದಾರೆ.

ಆದರೆ, ಕೋವಿಡ್ ವೇಳೆ ಗೋವಾ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡಿದೆ. ಗಡಿಗಳು ಬಂದ್ ಆಗಿ ಕನ್ನಡಿಗರು ಪಡಬಾರದ ಕಷ್ಟ ಪಟ್ಟಿದ್ದಾರೆ. ಮನುಷ್ಯತ್ವದ ಆಧಾರ ಮೇಲೆ ಗೋವಾ ಸರ್ಕಾರ ಕನ್ನಡಿಗರನ್ನು ನೋಡಬಹುದಿತ್ತು. ಬಿಜೆಪಿಗೆ ಕನ್ನಡಿಗರು ಅಂದ್ರೆ ದ್ವೇಷ ಮನೋಭಾವ ಇದೆ. ಈಗ ಅವಕಾಶ ಬಂದಿದೆ, ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದರಲ್ಲಿ ಸಂಶಯವೇ ಇಲ್ಲ. ಈ ಬಾರಿ ಗೋವಾದಲ್ಲಿ ಕಾಂಗ್ರೆಸ್ ತನ್ನ ಬಲದ ಮೇಲೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೋವಾದ ಪಣಜಿಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್

ಬಿಜೆಪಿಗೆ ಹೆಬ್ಬಾಳ್ಕರ್ ತಿರುಗೇಟು: ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಗೋವಾ ಬಿಜೆಪಿ ಸರ್ಕಾರ ಬಹಳಷ್ಟು ಹಗರಣ, ಭ್ರಷ್ಟಾಚಾರ ಮಾಡಿದೆ ಎಂದು ಮಾಜಿ ರಾಜ್ಯಪಾಲರೇ ಹೇಳಿದ್ದಾರೆ. ಇದಕ್ಕಿಂತ ಏನಾದರೂ ಸಾಕ್ಷಿ ಬೇಕಾ?. ಅಂಗೈ ಹುಣ್ಣಿಗೆ ಕನ್ನಡಿ ಬೇಕಾ? ಅಂತಾ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇದೆಯಾ?, ಗೋವಾದ ಪ್ರಬುದ್ಧ ಮತದಾರರು ಭ್ರಮನಿರಸನಗೊಂಡಿದ್ದಾರೆ. ಹತ್ತು ವರ್ಷದಿಂದ ಬಿಜೆಪಿಯವರು ಏನು ಮಾತನಾಡಿದ್ದಾರೋ ಅದನ್ನು ಮಾಡಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಜನ ನಿರ್ಧಾರ ತಗೆದುಕೊಂಡಿದ್ದಾರೆ ಎಂದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.