ಬೆಳಗಾವಿ: ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಹಿನ್ನೆಲೆಯಿರುವ ರಾಜಹಂಸಗಡ್ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಕೆತ್ತನೆ ಸ್ಥಳಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ರಾಜಹಂಸ ಕೋಟೆಯ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯ ಮಂತ್ರಿಗಳಾಗಿದ್ದ ಸಾ.ರಾ ಮಹೇಶ್ ಅವರು 5 ಕೋಟಿ ರೂ ಹಾಗೂ ಈಗಿನ ಬಿ.ಎಸ್.ಯಡಿಯೂರಪ್ಪ ಸರ್ಕಾರ 3 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಿದೆ. ಕೋಟೆಯ ಅಭಿವೃದ್ಧಿ ಕಾಮಗಾರಿಗಳು ತೀವ್ರ ಪ್ರಗತಿಯಲ್ಲಿ ಸಾಗುತ್ತಿದ್ದು, ಆದಷ್ಟು ಬೇಗ ಮುಕ್ತಾಯಗೊಳ್ಳಲಿವೆ ಎಂದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ, ನೀರಾವರಿ, ಒಳಚರಂಡಿ ನಿರ್ಮಾಣ, ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳು ನಿರಂತರ ನಡೆಯುತ್ತಿವೆ ಎಂದು ಅವರು ಹೇಳಿದರು.