ETV Bharat / state

ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್.. ಸಮರ್ಪಕ ಉತ್ತರ ನೀಡದೆ ಪೇಚಿಗೆ ಸಿಲುಕಿದ ಉನ್ನತ ಶಿಕ್ಷಣ ಸಚಿವರು

ಎಸ್‌ಸಿ, ಎಸ್‌ಟಿ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲು ಅನುದಾನ ಬಳಕೆ ವಿಷಯದಲ್ಲಿ ಸಮಂಜಸವಾದ ಉತ್ತರ ನೀಡುವಲ್ಲಿ ಸಚಿವರು ತಡವಡಿಸಿದರು.

Laptop for SC ST students issue
ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ
author img

By

Published : Dec 22, 2022, 8:04 PM IST

ಬೆಳಗಾವಿ: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡುವ ವಿಚಾರ ಸಂಬಂಧ ಸಮರ್ಪಕವಾಗಿ ಉತ್ತರ ನೀಡದೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಪೇಚಿಗೆ ಸಿಲುಕಿದ ಪ್ರಸಂಗ ವಿಧಾನಸಭೆಯಲ್ಲಿ ಇಂದು ನಡೆಯಿತು.

ಎಸ್‌ಸಿ, ಎಸ್‌ಟಿ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್ ನೀಡಲು ಅನುದಾನ ಬಳಕೆ ವಿಷಯದಲ್ಲಿ ಸಮಂಜಸವಾದ ಉತ್ತರ ನೀಡುವಲ್ಲಿ ಸಚಿವರು ತಡವಡಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಸಚಿವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ಸ್ಪಷ್ಟ ಉತ್ತರ ನೀಡುವಂತೆ ಹೇಳಿದ್ದು ಸಚಿವರು ಮತ್ತಷ್ಟು ಮುಜಗರಕ್ಕೊಳಗಾಗಬೇಕಾಯಿತು. ಬಳಿಕ ಸಚಿವರು ಸಮರ್ಪಕ ಉತ್ತರ ನೀಡದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರಿಗೆ ಬೇರೆ ರೂಪದಲ್ಲಿ ಉತ್ತರ ಕೊಡಿಸಲಾಗುವುದು ಎಂದು ಸ್ಪೀಕರ್ ಕಾಗೇರಿ ಅಶ್ವಾಸನೆ ನೀಡಿದರು.

ಇಂದು ಪ್ರಶ್ನೊತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಅಬ್ಬಯ್ಯ ಪ್ರಸಾದ್ ಕಳೆದ ಮೂರು ವರ್ಷಗಳಿಂದ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಯಾಗದಿರುವ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಸಮಾಜ ಕಲ್ಯಾಣ ಇಲಾಖೆಯಿಂದ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ, ಪ್ರತಿ ಇಲಾಖೆಯಲ್ಲಿಯೂ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಇರುತ್ತದೆ. ಆ ಮೊತ್ತವನ್ನು ಎಸ್‌ಸಿ, ಎಸ್‌ಟಿ ವರ್ಗದ ಅಭಿವೃದ್ಧಿಗೆ ಬಳಕೆ ಮಾಡಬೇಕು. ಉನ್ನತ ಶಿಕ್ಷಣ ಇಲಾಖೆಯಲ್ಲಿಯೂ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಇದ್ದು, ಸಮಾಜ ಕಲ್ಯಾಣ ಇಲಾಖೆ ಯಾವ ಕಾರಣಕ್ಕಾಗಿ ನೀಡಬೇಕು ಎಂದು ಪ್ರಶ್ನಿಸಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಪರಿಷತ್ ಸಭೆಯಲ್ಲಿ ಲ್ಯಾಪ್‌ಟಾಪ್ ವಿತರಣೆ ಸಂಬಂಧ 245 ಕೋಟಿ ರೂಪಾಯಿ ಇದ್ದು, ಎಲ್ಲಾ ವಿಶ್ವವಿದ್ಯಾಲಯಗಳಿಗೆ 1.45 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಚಿವರು ಹೇಳಿದ್ದು, ಕಾಂಗ್ರೆಸ್ ಸದಸ್ಯರು ಇದು ಗೊಂದಲದ ಉತ್ತರವಾಗಿದ್ದು ಸ್ಪಷ್ಟವಾಗಿ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಸಚಿವರು ಸ್ಪಷ್ಟವಾಗಿ ಉತ್ತರ ನೀಡಿಲ್ಲ. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್ ನೀಡಲು ಯಾವ ಇಲಾಖೆಯ ಅನುದಾನ ಬಳಕೆ ಮಾಡಲಾಗುತ್ತದೆ ಎಂಬುದರ ಬಗ್ಗೆ ತಿಳಿಸಬೇಕು ಎಂದು ಆಗ್ರಹಿಸಿದರು. ಸ್ಪಷ್ಟವಾದ ಉತ್ತರ ಸಿಗದ ಕಾರಣಕ್ಕಾಗಿ ಕಾಂಗ್ರೆಸ್ ಸದಸ್ಯರಿಗೆ ಬೇರೆ ರೂಪದಲ್ಲಿ ಉತ್ತರ ಕೊಡಿಸುವುದಾಗಿ ಸಭಾಧ್ಯಕ್ಷರು ಹೇಳಿ, ಚರ್ಚೆಯನ್ನು ಮುಕ್ತಾಯ ಮಾಡಿದರು.

ತಾಲೂಕು ಕೇಂದ್ರ ನಿರ್ಮಾಣ ಆಗಿಲ್ಲ: 2017-18 ನೇ ಸಾಲಿನಲ್ಲಿ ಘೋಷಣೆಯಾಗಿರುವ 50 ಹೊಸ ತಾಲೂಕುಗಳಲ್ಲಿಯೂ ಅನುದಾನದ ಕೊರತೆಯಿಂದಾಗಿ ತಾಲೂಕು ಆಸ್ಪತ್ರೆ ಕೇಂದ್ರವನ್ನು ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಚಿಕ್ಕಮಾದು ಪ್ರಶ್ನೆಗೆ ಉತ್ತರ ನೀಡಿದರು.

ಮೈಸೂರು ಜಿಲ್ಲೆಯ ಸರಗೂರು ತಾಲೂಕು ಸೇರಿದಂತೆ 2017-18 ರಲ್ಲಿ 50 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಯಿತು. ಹೊಸದಾಗಿ ಘೋಷಣೆ ಮಾಡಿರುವ ಯಾವುದೇ ತಾಲೂಕುಗಳಲ್ಲಿ ತಾಲೂಕು ಆಸ್ಪತ್ರೆ ಕೇಂದ್ರಗಳನ್ನು ನಿರ್ಮಾಣ ಮಾಡಲು ಆಗಿಲ್ಲ. ಇದು ಅನುದಾನ ಕೊರತೆಯಿಂದಾಗಿ ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.

ಆಸ್ಪತ್ರೆಗಳ ನಿರ್ಮಾಣಕ್ಕೆ ಅಗತ್ಯ ಇರುವ ಭೂಮಿ ನೇರವಾಗಿ ಖರೀದಿಗೆ ಅವಕಾಶ ಇಲ್ಲ. ಭೂ ಸ್ವಾದೀನ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳ ಮೂಲಕ ಭೂಸ್ವಾದೀನ ಮಾಡಿಕೊಳ್ಳಲು ಅವಕಾಶ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಹೊಸ ತಾಲೂಕುಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಾಣ ಆಗಬೇಕು. ಅನುದಾನಕ್ಕಾಗಿ ಹಣಕಾಸು ಇಲಾಖೆಗೆ ಪ್ರಸ್ತಾಪ ಸಲ್ಲಿಸುತ್ತೇವೆ ಎಂದರು. ಸರಗೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆಯನ್ನಾಗಿ ಸ್ಥಾಪಿಸಲು ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸ್ಥಾಪಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಹೇಳಿದರು.

ವಿಶೇಷ ನೇಮಕಾತಿ: ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಕಾಯಂಗೊಳಿಸುವುದು ಕಷ್ಟಕರವಾಗಿದೆ. ಆದರೆ, ಅವರನ್ನು ವಿಶೇಷ ನೇಮಕಾತಿಯಡಿ ನಿಯೋಜನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಪ್ರಶ್ನೋತ್ತರದ ವೇಳೆ ಜೆಡಿಎಸ್ ಸದಸ್ಯ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಲೋಪತಿ ವೈದ್ಯರನ್ನು ಸಹ ವಿಶೇಷ ನೇಮಕಾತಿಯಡಿಯಲ್ಲಿ ನಿಯೋಜನೆಗೆ ಕ್ರಮ ಕೈಗೊಂಡಂತೆ ಆಯುಷ್ ಇಲಾಖೆಯಲ್ಲಿ ಗುತ್ತಿಗೆ ವೈದ್ಯರ ನಿಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಒಂದು ಗ್ರೇಸ್ ಅಂಕ ನೀಡಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವೈದ್ಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಆಯುಷ್ ಇಲಾಖೆಗೆ ಸರ್ಕಾರವು ಹೆಚ್ಚು ಉತ್ತೇಜನ ನೀಡುತ್ತಿದ್ದು, 903 ಹುದ್ದೆಗಳು ಮಂಜೂರಾಗಿವೆ. ಈಪೈಕಿ 694 ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗಿದೆ. 209 ಹುದ್ದೆಗಳು ಖಾಲಿ ಇವೆ. ಇದರಲ್ಲಿ 44 ಹುದ್ದೆಗಳಿಗೆ ಗುತ್ತಿಗೆ ಆಧಾರ ಮೇಲೆ ವೈದ್ಯರನ್ನು ನಿಯೋಜನೆ ಮಾಡಲಾಗಿದೆ. ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು. ಇದಲ್ಲದೇ, ರಾಜ್ಯದಲ್ಲಿ 2011-12 ನೇ ಸಾಲಿನಿಂದ ಕೇಂದ್ರ ಪುರಸ್ಕೃತ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ 2011-12 ನೇ ಸಾಲಿನಲ್ಲಿ 109 ವೈದ್ಯರು ಮತ್ತು 2018-19 ನೇ ಸಾಲಿನಲ್ಲಿ 22 ವೈದ್ಯರನ್ನು ನೇಮಕ ಮಾಡಲಾಗಿದ್ದು, ಒಟ್ಟು 131 ವೈದ್ಯರು ಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಚಿರತೆ ದಾಳಿಯಿಂದ ರಕ್ಷಿಸಿ.. ಸದನದಲ್ಲಿ ಶಾಸಕರ ಅಳಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.