ಬೆಳಗಾವಿ: ಗೋಕಾಕ್ನಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗರಿಂದ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ಹಿನ್ನೆಲೆ ಗೋಕಾಕ್ ಪಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಗೋಕಾಕ್ ಪಟ್ಟಣದಲ್ಲಿ ಪೊಲೀಸ್ ಸರ್ಪಗಾವಲು ನಕಲಿ ಸಿಡಿ ಬಿಡುಗಡೆ ಮಾಡಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡಲಾಗಿದೆ. ಈ ಕೂಡಲೇ ದಿನೇಶ ಕಲ್ಲಗಹಳ್ಳಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗೋಕಾಕ್‌ನ ಪಟ್ಟಣದಲ್ಲಿ ಪ್ರತ್ಯೇಕವಾಗಿ ಎರಡು ಕಡೆ ರಮೇಶ ಜಾರಕಿಹೊಳಿ ಅಭಿಮಾನಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಎಎಸ್‌ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ನಾಲ್ವರು ಡಿವೈಎಸ್‌ಪಿ, 10 ಸಿಪಿಐ,15 ಪಿಎಸ್ಐ ಸೇರಿದಂತೆ 200ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, 3 ಕೆಎಸ್‌ಆರ್‌ಪಿ, 6 ಡಿಎಆರ್ ತುಕಡಿ ವಾಹನಗಳನ್ನೂ ಭದ್ರತೆಗೆ ನಿಯೋಜಿಸಲಾಗಿದೆ.
ಜಾರಕಿಹೊಳಿ ಬೆಂಬಲಿಗರು ದಿನೇಶ ಕಲ್ಲಹಳ್ಳಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕೊಣ್ಣೂರು ಗ್ರಾಮದ ಮರಡಿಮಠಿ ಕ್ರಾಸ್ನಿಂದ ಗೋಕಾಕ್ ಡಿವೈಎಸ್‌ಪಿ ಕಚೇರಿವರೆಗೂ ರ‍್ಯಾಲಿ ನಡೆಸಿ ಮನವಿ ಸಲ್ಲಿಸಲಿದ್ದು, ಮತ್ತೊಂದು ಕಡೆ ಗೋಕಾಕ್‌ನ ಮಾಲದಿನ್ನಿ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗೋಕಾಕ್ ನಗರದಾದ್ಯಂತ ಖಾಕಿ ಕಣ್ಗಾವಲಿಟ್ಟಿದೆ.
ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಫ್ಐಆರ್ ದಾಖಲಿಸುವ ಬಗ್ಗೆ ಪೊಲೀಸರಲ್ಲೇ ಗೊಂದಲ.!