ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟಿದ್ದ ಸಿಆರ್ಪಿಎಫ್ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಪಗಾವಿ ಗ್ರಾಮದ ಹೊರವಲಯದಲ್ಲಿ ಇಂದು ನೆರವೇರಿತು.
ಸಿಆರ್ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಬೈಲಹೊಂಗಲ ತಾಲೂಕಿನ ಸಂಪಗಾವಿ ಗ್ರಾಮದ ಯೋಧ ವಿನೋದ್ ಶಂಕ್ರಪ್ಪ ಉಳಾಗಡ್ಡಿ (35) ಅನಾರೋಗ್ಯದಿಂದ ಶುಕ್ರವಾರ ಸಾವನ್ನಪ್ಪಿದ್ದರು. ಇಂದು ಬೆಳಿಗ್ಗೆ ಯೋಧನ ಪಾರ್ಥಿವ ಶರೀರ ಸ್ವಗ್ರಾಮ ಸಂಪಗಾವಿಗೆ ಆಗಮಿಸಿತ್ತು. ಈ ವೇಳೆ ಗ್ರಾಮಸ್ಥರು ಹಾಗೂ ತಾಲೂಕಾಡಳಿತವು ಯೋಧನ ಪಾರ್ಥಿವ ಶರೀರವನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು.
ಬಳಿಕ ಯೋಧನ ಸಂಬಂಧಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಪೊಲೀಸರು ಎಷ್ಟೇ ಬಿಗಿ ಬಂದೋಬಸ್ತ್ ವಹಿಸಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಯೋಧನಿಗಾಗಿ ಕಂಬನಿ ಮಿಡಿದರು.