ಬೆಳಗಾವಿ: ಲಖನೌದ ವಾಜಿರಗಂಜ ನ್ಯಾಯಾಲಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದ ಹಲವಾರು ವಕೀಲರು ಗಾಯಗೊಂಡಿದ್ದಾರೆ. ಸರ್ಕಾರದಿಂದ ವಕೀಲರಿಗೆ ಸೂಕ್ತ ಭದ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ವಕೀಲರ ಬಾರ್ ಅಸೋಸಿಯೇಷನ್ ಸಂಘದಿಂದ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ನ್ಯಾಯಾಲಯದಲ್ಲಿ ಸ್ಪೋಟ ಸಂಭವಿಸಲು ಸರ್ಕಾರದ ವೈಫಲ್ಯವೇ ಕಾರಣ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕೂಡಲೇ ಭದ್ರತೆ ವದಗಿಸಬೇಕು. ಶೀಘ್ರವೇ ಅಪರಾಧಿಗಳನ್ನು ಬಂಧಿಸಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.