ಅಥಣಿ(ಬೆಳಗಾವಿ): ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಯುವಕರ ನಿರುದ್ಯೋಗ ಹೋಗಲಾಡಿಸಲು ಅಗ್ನಿಪಥ್ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ. ಕಳೆದ 30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಈ ಯೋಜನೆ ರೂಪಿಸಿತ್ತು. ಆದರೆ ನಮ್ಮ ಸರ್ಕಾರ ಇದನ್ನು ಜಾರಿಗೆ ತರುತ್ತಿದೆ. ಆದರೆ ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು.
ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ. ಅಗ್ನಿಪಥ್ ಯೋಜನೆಯಿಂದ ಚಿಕ್ಕ ವಯಸ್ಸಿನಲ್ಲೇ ನಾಲ್ಕು ವರ್ಷ ದೇಶ ಸೇವೆ ಮಾಡುತ್ತಾರೆ. ತಮ್ಮ ಜೀವನ ರೂಪಿಸಿಕೊಳ್ಳಲು ಒಂದು ಯೋಜನೆ ಇದಾಗಿದೆ ಮತ್ತು ದೇಶ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ. ಕೆಲವು ರಾಷ್ಟ್ರಗಳಲ್ಲಿ ದೇಶ ಸೇವೆಗೆ ಇಂತಿಷ್ಟು ವರ್ಷಗಳ ಕಾಲ ಸೇನೆಯಲ್ಲಿ ಕೆಲಸ ಮಾಡುವ ಕಾನೂನು ಜಾರಿಯಲ್ಲಿದೆ.
ನಮ್ಮ ದೇಶದಲ್ಲಿ ಸೇನೆ ಸೇರಬೇಕೆಂಬ ಯುವಕರು ಕೇವಲ ನಾಲ್ಕು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಬಹುದು. ಮತ್ತೆ ಕೆಲಸ ಮಾಡಲು ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಅವರಿಗೆ ಅವಕಾಶ ಸಿಗುತ್ತದೆ. ಯುವಕರು ವದಂತಿಗಳನ್ನು ನಂಬಬೇಡಿ ಎಂದು ಲಕ್ಷ್ಮಣ್ ಸವದಿ ಕಿವಿಮಾತು ಹೇಳಿದರು.
ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಮರುವಿಂಗಡಣೆ: ವಿಪಕ್ಷದವರಿಂದ ರಾಜಕೀಯಕ್ಕಾಗಿ ಆರೋಪ ಎಂದ ಸಿಎಂ