ಬೆಳಗಾವಿ/ಬೆಂಗಳೂರು: ರಾಜ್ಯ, ಕೇಂದ್ರ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ ಗ್ರೂಪ್ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಖಾಸಗಿ ವಿಧೇಯಕಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿತು. ಖಾಸಗಿ ಕಾರ್ಯಕಲಾಪದಲ್ಲಿ ವಿಧೇಯಕವನ್ನು ಕಾಂಗ್ರೆಸ್ ಸದಸ್ಯ ಯು.ಬಿ ವೆಂಕಟೇಶ್ ಮಂಡಿಸಿದರು. ಮೀಸಲಾತಿ ನೀಡುವ ಕುರಿತು ಸಂವಿಧಾನಕ್ಕೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿ ಸದನದ ಅನುಮತಿ ಕೋರಲಾಗಿತ್ತು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಮತಕ್ಕೆ ಹಾಕಿದ್ದು, ಧ್ವನಿಮತದ ಮೂಲಕ ಒಪ್ಪಿಗೆ ನೀಡಲಾಯಿತು. ಇದಾದ ನಂತರ ಸದನವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಸೇರುವಂತೆ ಮುಂದೂಡಲಾಗಿದೆ.
ಇದನ್ನೂ ಓದಿ: 2022 ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕಕ್ಕೆ ಧ್ವನಿಮತದ ಅಂಗೀಕಾರ