ETV Bharat / state

ಬಡ ವರ್ಗದ ಮಕ್ಕಳ ಶೈಕ್ಷಣಿಕ ಶುಲ್ಕವನ್ನು ಸರ್ಕಾರವೇ ಭರಿಸಲಿ: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಿಂದ ಒತ್ತಾಯ - ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ವೈದ್ಯರು, ನರ್ಸ್‍ಗಳು ಕೊರೊನಾ ಸೋಂಕು ತಡೆಯಲು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಅವರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

Pressure from the Nationalist Congress Party
ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
author img

By

Published : Jun 1, 2020, 11:12 PM IST

ಬೆಳಗಾವಿ: ಖಾಸಗಿ ಶಾಲೆಯಲ್ಲಿ ಓದುತ್ತಿರುವ ಹಳದಿ ಪಡಿತರ ಕಾರ್ಡ್‍ದಾರರ ಮಕ್ಕಳ ಶೈಕ್ಷಣಿಕ ಶುಲ್ಕವನ್ನು ರಾಜ್ಯ ಸರ್ಕಾರವೇ ಭರಿಸಬೇಕೆಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಪದಾಧಿಕಾರಿಗಳು, ಕೊರೊನಾ ಸೋಂಕು ತಡೆಗೆ ನಿರಂತರ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್‍ಗಳಿಗೆ ಶೀಘ್ರ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು. ಲಾಕ್‍ಡೌನ್‍ನಿಂದ ಬಡವರು ತತ್ತರಿಸಿ ಹೋಗಿದ್ದಾರೆ. ದುಡಿಯಲು ಉದ್ಯೋಗ, ಆರ್ಥಿಕ ಶಕ್ತಿಯಿಲ್ಲದೇ ಪರದಾಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿರುವ ಮಧ್ಯಮ ವರ್ಗದ ಜನರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದ್ದು, ಶೈಕ್ಷಣಿಕ ಶುಲ್ಕ ಭರಿಸಲಾಗದೇ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಕ್ಕಳ ಶೈಕ್ಷಣಿಕ ಶುಲ್ಕವನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು. ಇದಲ್ಲದೇ ವೈದ್ಯರು, ನರ್ಸ್‍ಗಳು ಕೊರೊನಾ ಸೋಂಕು ತಡೆಯಲು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಅವರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಗ್ರಾಮ ಪಂಚಾಯಿತಿ ಚುನಾವಣೆ ನಡೆಸದೇ ಆಡಳಿತಾಧಿಕಾರಿ ನೇಮಿಸಬೇಕು. ಸ್ವಂತ ಜಾಗದಲ್ಲಿ ಕಟ್ಟಡ ನಿರ್ಮಿಸಿರುವ ಮಧ್ಯಮವರ್ಗದವರ ಮನೆಗಳನ್ನು ಸಕ್ರಮಗೊಳಿಸಬೇಕು ಎಂದು ಆಗ್ರಹಿಸಿ ರಾಷ್ಟ್ರವಾದಿ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ರಾಜು ಪಾಟೀಲ್​​ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.