ಬೆಳಗಾವಿ: ಗೋಕಾಕ್ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗಟ್ಟಲು ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮಾಜಿ ಸಚಿವ ಸತೀಶ ಜಾರಕಿಹೊಳಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಗೋಕಾಕ್ ಕ್ಷೇತ್ರದ ಉಪಚುಣಾವಣೆ ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ನಡೆಯಬೇಕು. ಕ್ಷೇತ್ರದಲ್ಲಿ ಚುನಾವಣೆ ಅಕ್ರಮ ತಡೆಯಲು, ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಮನವಿ ತಿಳಿಸಲಾಗಿದೆ.
ಗೋಕಾಕ್ ತಾಲೂಕು ಪಂಚಾಯಿತಿ ಇಒ ಬಸವರಾಜ ಹೆಗ್ಗನಾಯಿಕ್, ಬಿಇಒ ಜಿ.ಬಿ. ಬಳಿಗಾರ, ತಾಲೂಕು ಪಂಚಾಯಿತಿ ಪ್ರಭಾರಿ ಸಹಾಯಕ ನಿರ್ದೇಶಕ ಎಸ್.ಎಚ್.ದೇಸಾಯಿ, ಪ್ರಭಾರಿ ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ಎಂಬುವವರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಕೋರಿದ್ದಾರೆ. ಸತೀಶ ಜಾರಕಿಹೊಳಿಗೆ ಚುನಾವಣೆ ಅಧಿಕಾರಿ ಸಂಜೀವಕುಮಾರ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ.