ಅಥಣಿ : ಮಾರಾಟಗಾರರು ಮತ್ತು ಗ್ರಾಹಕರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಎಲ್ಲಾ ಮದ್ಯದಂಗಡಿ ಮಾಲೀಕರು ಮತ್ತು ಗ್ರಾಹಕರಿಗೆ ಅಬಕಾರಿ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ. ಆದರೆ, ತಾಲೂಕಿನ ಕೆಲ ಮದ್ಯದಂಗಡಿಗಳು ಈ ನಿಯಮಗಳನ್ನು ಪಾಲಿಸದೆ, ಬೇಕಾಬಿಟ್ಟಿ ಮದ್ಯ ವ್ಯಾಪಾರದಲ್ಲಿ ತೊಡಗಿವೆ.
ಈ ರೀತಿಯ ಬೇಜವಾಬ್ದಾರಿಯನ್ನು ಗಮನಿಸಿದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಭೀತಿ ಮುಗಿಯುವವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಬಗ್ಗೆ, ತಾಲೂಕು ಅಬಕಾರಿ ಅಧಿಕಾರಿ ಮಹೇಶ್ ಧೂಳಪ್ಪ ಈಟಿವಿ ಭಾರತ ಜೊತೆ ದೂರವಾಣಿ ಮೂಲಕ ಮಾತನಾಡಿ, ನಿಯಮ ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.