ಅಥಣಿ: ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಉತ್ತಮ ಬೇಡಿಕೆ ಉಂಟಾಗಿ ಕೈ ತುಂಬಾ ಹಣ ಗಳಿಸಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರು ಇದೀಗ ಕೊರೊನಾ ವೈರಸ್‌ನಿಂದಾಗಿ ನಷ್ಟ ಅನುಭವಿಸುತ್ತಿದ್ದಾರೆ.
ಅಥಣಿ ತಾಲೂಕಿನ ಮಾಯನಟ್ಟಿ ಗ್ರಾಮದ ರೈತ ಶಂಕರ ಬೇವನೂರು ತನ್ನ ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣಿಗೆ ಸೂಕ್ತ ಬೆಲೆಯಿಲ್ಲದೇ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾನೆ. ಪ್ರತಿ ವರ್ಷ ಒಣ ಭೂಮಿಯಲ್ಲಿ ಹನಿ ನೀರಾವರಿ ಪದ್ಧತಿಯಲ್ಲಿ ಕಲ್ಲಂಗಡಿ ಹಣ್ಣು ಬೆಳೆದು ದೂರದ ಗೋವಾ ಮುಂಬೈನಂತಹ ಹೊರರಾಜ್ಯಗಳಿಗೆ ಮಾರಾಟ ಮಾಡಿ, ಕೈತುಂಬ ಹಣ ಗಳಿಸುತ್ತಿದ್ದರು.
ಈ ಬಾರಿ ಅಂದುಕೊಂಡಂತೆ ಬೆಳೆ ಬಂದರೂ ಸೂಕ್ತ ಬೆಲೆ ಸಿಗದೆ ಬೆಲೆಯಿಲ್ಲದೇ ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಬೆಳೆ ಪರಿಹಾರ ಒದಗಿಸಿ ಕೊಡುವ ಮೂಲಕ ರೈತರ ಸಮಸ್ಯೆಗೆ ಸ್ಪಂದಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.