ETV Bharat / state

ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳಿಂದ ಜ. 25ರಿಂದ 30ರವರೆಗೆ ದೂರು ಸ್ವೀಕಾರ - ಬೆಳಗಾವಿ ಲೋಕಾಯುಕ್ತ ಅಧಿಕಾರಿ

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡುಬಹುದು. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ಪೊಲೀಸ್ ಅಧೀಕ್ಷಕಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

ಬೆಳಗಾವಿ
ಬೆಳಗಾವಿ
author img

By

Published : Jan 21, 2021, 9:17 PM IST

ಬೆಳಗಾವಿ: ಜಿಲ್ಲೆಯ ಅಧಿಕಾರಿಗಳಿಂದ ಜ.25 ರಿಂದ 30 ರವರೆಗೆ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಬೆಳಗಾವಿ ಪೊಲೀಸ್ ಅಧೀಕ್ಷಕಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

ಜ. 25 ರಂದು ರಾಮದುರ್ಗ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಡಿಎಸ್​ಪಿ ಜೆ.ರಘು ಅವರು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಅದೇ ದಿನ ಸವದತ್ತಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪೊಲೀಸ್ ಇನ್‍ಸ್ಪೆಕ್ಟರ್ ಎಂ.ಎಂ.ತಹಶೀಲ್ದಾರ ಅವರು ಅಹವಾಲು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಯಶೋಧಾ ವಂಟಗೋಡಿ ಅವರು ಜ.27 ರಂದು ಖಾನಾಪೂರ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿಗಳನ್ನು ಸ್ವೀಕರಿಸುವರು.

ಅಥಣಿ ಮತ್ತು ಕಾಗವಾಡ ತಾಲೂಕಿನಲ್ಲಿ ಜ.27 ರಂದು ಅಥಣಿ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊಲೀಸ್ ಇನ್‍ಸ್ಪೆಕ್ಟರ್ ಎಸ್.ಡಿ.ಹಳ್ಳೂರ ಅವರು ಅಹವಾಲು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಡಿಎಸ್​ಪಿ ಜೆ.ರಘು ಅವರು ಗೋಕಾಕ ಮತ್ತು ಮೂಡಲಗಿ ತಾಲೂಕಿಗೆ ಸಂಬಂಧಿಸಿದಂತೆ ಜ.28 ರಂದು ಗೋಕಾಕ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿಗೆ ಸಂಬಂಧಿಸಿದಂತೆ ಜ.28 ರಂದು ಅಥಣಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪೊಲೀಸ್ ಇನ್‍ಸ್ಪೆಕ್ಟರ್ ಪಿ.ಆರ್.ಧಬಾಲಿ ಅವರು ಅರ್ಜಿ ಸ್ವೀಕರಿಸುವರು.

ರಾಯಭಾಗ ತಾಲೂಕಿಗೆ ಸಂಬಂಧಿಸಿದಂತೆ ಜ.28 ರಂದು ರಾಯಭಾಗ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಲೋಕಾಯುಕ್ತ ಪೊಲೀಸ್ ಇನ್‍ಸ್ಪೆಕ್ಟರ್ ಎಸ್.ಡಿ.ಹಳ್ಳೂರ ಅವರು ಅಹವಾಲು ಸ್ವೀಕರಿಸುತ್ತಾರೆ.

ಬೈಲಹೊಂಗಲ ಮತ್ತು ಕಿತ್ತೂರ ತಾಲೂಕಿಗೆ ಸಂಬಂಧಿಸಿದ ಅರ್ಜಿಗಳನ್ನು ಜ. 29 ಬೈಲಹೊಂಗಲ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಲೋಕಾಯುಕ್ತ ಪೊಲೀಸ್ ಇನ್‍ಸ್ಪೆಕ್ಟರ್ ಎಂ.ಎಂ.ತಹಶೀಲ್ದಾರ ಅವರು, ಹುಕ್ಕೇರಿ ತಾಲೂಕಿಗೆ ಸಂಬಂಧಿಸಿದಂತೆ ಜ. 30 ರಂದು ಹುಕ್ಕೇರಿ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಲೋಕಾಯುಕ್ತ ಪೊಲೀಸ್ ಇನ್‍ಸ್ಪೆಕ್ಟರ್ ಪಿ.ಆರ್.ಧಬಾಲಿ ಅವರು ಅಹವಾಲು ಸ್ವೀಕರಿಸುತ್ತಾರೆ.

ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡುಬಹುದು. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.