ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಕೂಟಿಯಲ್ಲಿ ಬಚ್ಚಿಡಲಾಗಿದ್ದ 3.62 ಲಕ್ಷ ನಗದನ್ನು ಲೋಕಾಯುಕ್ತ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿರುವ ಕೊಗನೊಳ್ಳಿ ಚೆಕ್ ಪೋಸ್ಟ್ ಮೇಲೆ ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಸದ್ಯ ಲೋಕಾಯುಕ್ತ ಅಧಿಕಾರಗಳು ದಾಖಲೆ ಪರಿಶೀಲನೆ ಮುಗಿಸಿದ್ದು, ಈ ವೇಳೆ ಸ್ಕೂಟಿಯಲ್ಲಿ ಬಚ್ಚಿಟ್ಟಿದ್ದ 500 ರೂ. ಮುಖಬೆಲೆಯ 3.62 ಲಕ್ಷ ನಗದನ್ನು ಜಪ್ತಿ ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕೊಗನೊಳ್ಳಿ ಚೆಕ್ ಪೋಸ್ಟ್ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದು, ಪ್ರಮುಖ ಬೆಂಗಳೂರು - ಮುಂಬೈ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಈ ಹೆದ್ದಾರಿ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳಿಂದ ಚೆಕ್ ಪೋಸ್ಟ್ನಲ್ಲಿ ಅಧಿಕಾರಿಗಳು ಹಣ ವಸೂಲಿ ಮಾಡುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದವು. ಸಾರ್ವಜನಿಕರ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
(ಓದಿ: ಬೆಳಗಾವಿ: ಕೊಗನೊಳ್ಳಿ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ದಾಳಿ)