ಬೆಳಗಾವಿ: ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಕ್ರದಡಿ ಸಿಲುಕಿದ ಬೈಕ್ ಸವಾರನೊಬ್ಬ ಸ್ಥಳದಲ್ಲೇ ನರಳಾಡಿ ಸಾವನ್ನಪ್ಪಿರುವ ಘಟನೆ ನಗರದ ಯಡಿಯೂರಪ್ಪ ಮಾರ್ಗದಲ್ಲಿ ನಡೆದಿದೆ. ಮೃತನ ಮಾಹಿತಿ ಈವರೆಗೂ ಲಭ್ಯವಾಗಿರುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಪಕ್ಕದಲ್ಲಿ ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ವ್ಯಕ್ತಿಯ ದೇಹ ಲಾರಿಯ ಚಕ್ರದಲ್ಲಿ ಸಿಲುಕಿ ಎಳೆದುಕೊಂಡು ಬಂದಿರುವ ಪರಿಣಾಮ ಕೆಲಹೊತ್ತು ಮಾತ್ರ ಜೀವಂತವಾಗಿದ್ದ. ಸ್ಥಳದಲ್ಲಿದ್ದ ಸಾರ್ವಜನಿಕರು ಗಂಭೀರವಾಗಿ ಗಾಯಗೊಂಡ ಈ ವ್ಯಕ್ತಿಗೆ ನೀರು ಕುಡಿಸಿ ಆರೈಕೆ ಮಾಡಿದರೂ ಆತ ಮಾತ್ರ ಬದುಕುಳಿಯಲಿಲ್ಲ.
ಬಳಿಕ ಸ್ಥಳಿಯರೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಪಘಾತವಾಗುತ್ತಿದ್ದಂತೆ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.