ETV Bharat / state

ರಾಜ್ಯದಲ್ಲಿ ಕಾಂಗ್ರೆಸ್ ಪರ ಸುನಾಮಿ ಎದ್ದಿದೆ : ಮಾಜಿ ಸಿಎಂ ಅಶೋಕ್​ ಚವ್ಹಾಣ್​​ - ಈಟಿವಿ ಭಾರತ ಕನ್ನಡ

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್​ ಚವ್ಹಾಣ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

maharashtra-ex-cm-ashok-chouhan-in-belagavi
ರಾಜ್ಯದಲ್ಲಿ ಕಾಂಗ್ರೆಸ್ ಪರ ಸುನಾಮಿ ಎದ್ದಿದೆ : ಮಾಜಿ ಸಿಎಂ ಅಶೋಕ್​ ಚವ್ಹಾಣ್​​
author img

By

Published : May 4, 2023, 3:44 PM IST

ರಾಜ್ಯದಲ್ಲಿ ಕಾಂಗ್ರೆಸ್ ಪರ ಸುನಾಮಿ ಎದ್ದಿದೆ : ಮಾಜಿ ಸಿಎಂ ಅಶೋಕ್​ ಚವ್ಹಾಣ್​​

ಬೆಳಗಾವಿ : ಬಿಜೆಪಿ ಅಭಿವೃದ್ಧಿ ವಿಷಯ ಬಿಟ್ಟು ಜಾತಿ ಧರ್ಮದ ಆಧಾರದಲ್ಲಿ ಮತಯಾಚನೆ ಮಾಡುತ್ತಿರುವುದು ವಿಪರ್ಯಾಸ. ಈ ಮೂಲಕ ಜನರನ್ನು ದಾರಿ ತಪ್ಪಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಡಬಲ್ ಎಂಜಿನ್ ಸರ್ಕಾರ ಎಂದು ಆಗಾಗ ಹೇಳುತ್ತಾರೆ. ಆದರೆ ರಾಜ್ಯದ ಜನತೆಗೆ ಈ ಬಗ್ಗೆ ತಿಳಿದಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಸೂಕ್ತ ಉತ್ತರ ನೀಡುತ್ತಾರೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವ್ಹಾಣ್​ ಹೇಳಿದ್ದಾರೆ.

ಇಂದು ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಈ ಬಾರಿ ಐದು ಪ್ರಮುಖ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ನೀಡಿದೆ. ಉಚಿತ ವಿದ್ಯುತ್, ಗೃಹ ಲಕ್ಷ್ಮೀ, ಅನ್ನಭಾಗ್ಯ, ನಿರುದ್ಯೋಗಿ ಯುವಕರಿಗೆ ಭತ್ಯೆ ಸೇರಿದಂತೆ ಸಾಕಷ್ಟು ಯೋಜನೆಯನ್ನು ಘೋಷಣೆ ಮಾಡಿದೆ. ಇದನ್ನು ಇಂತಿಷ್ಟು ಕಾಲದಲ್ಲಿ ಪೂರ್ಣಗೊಳಿಸುವ ಬಗ್ಗೆ ಕಾಂಗ್ರೆಸ್​ ಭರವಸೆ ನೀಡಿದ್ದು, ಜನರು ಕಾಂಗ್ರೆಸ್ ಮೇಲೆ ವಿಶ್ವಾಸ ಇರಿಸಿದ್ದಾರೆ. ಆದರೆ ಬಿಜೆಪಿ ಇದರ ವಿರುದ್ಧವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಸುನಾಮಿ ಎದ್ದಿದೆ ಎಂದು ಹೇಳಿದರು.

ಬಜರಂಗದಳ ನಿಷೇಧ ಕುರಿತು ಪ್ರತಿಕ್ರಿಯಿಸಿದ ಅವರು, ಹನುಮಾನ್ ಚಾಲೀಸಾವನ್ನು ನಾವು ಮನೆಯಲ್ಲಿ ಪಠಣ ಮಾಡುತ್ತೇವೆ. ಆದರೆ ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಹನುಮಾನ್ ಚಾಲೀಸಾ ಪಠಣ ಮಾಡುವುದು ಏಕೆ?. ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುವುದಿಲ್ಲ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುತ್ತದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಇಂದು ಬಿಜೆಪಿ ಅಭಿವೃದ್ಧಿ ವಿಷಯವನ್ನು ಬದಿಗೊತ್ತಿ ಜಾತಿ ಹಾಗೂ ಧರ್ಮದ ಆಧಾರದಲ್ಲಿ ಮತ ಕೇಳಲು ಆರಂಭಿಸಿರುವುದು ದುರ್ದೈವದ ಸಂಗತಿ. ಮೀಸಲಾತಿ ಘೋಷಣೆ ಮಾಡಿರುವ ಕುರಿತು ಮಾತನಾಡುವ ಬಿಜೆಪಿ, ಲಿಂಗಾಯತ, ಒಕ್ಕಲಿಗ ಸಮುದಾಯಕ್ಕೆ ಸರಿಯಾದ ನ್ಯಾಯ ಕೊಟ್ಟಿಲ್ಲ. ಅದರಲ್ಲಿಯೂ ಮುಸ್ಲಿಂ ಸಮುದಾಯದ ಮೀಸಲಾತಿ‌ಯನ್ನು ಕಸಿದುಕೊಂಡು ಬೇರೆಯವರಿಗೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕರ್ನಾಟಕವನ್ನು ಕೈಗಾರಿಕಾ ಕ್ಷೇತ್ರ, ಐಟಿ ಹಬ್ ಎಂದು ಕರೆಯುತ್ತೇವೆ. ಇಲ್ಲಿ ಜಾತಿ ಸಂಘರ್ಷ ಗಲಾಟೆಯಾಗುವುದು ರಾಜ್ಯದ ಅಭಿವೃದ್ಧಿ ಕುಂಠಿತವಾಗುವ ವಿಷಯ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಈಗಾಗಲೇ 40 ಪರ್ಸೆಂಟ್ ಕಮಿಷನ್ ಆರೋಪ ಇದೆ. ಹಾಗಾಗಿ ಜನರು ಅಭಿವೃದ್ಧಿ ವಿಷಯದ ಬಗ್ಗೆ ಮಾತನಾಡುವವರಿಗೆ ಮತ ನೀಡಿ ಗೆಲ್ಲಿಸುವ ಪಣ ತೊಟ್ಟಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ನಮಗೆ ಕರ್ನಾಟಕದಲ್ಲಿ ಎನ್ ಸಿಪಿ, ಎಂಇಎಸ್, ಶಿವಸೇನೆಯೊಂದಿಗೆ ಹೊಂದಾಣಿಕೆ‌ ಮಾಡಿಕೊಂಡು‌‌‌ ಚುನಾವಣೆ ನಡೆಸುವ ಅವಶ್ಯಕತೆ ಇಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅಶೋಕ್​ ಚವ್ಹಾಣ್​ ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್​ ನಾವಲಗಟ್ಟಿ, ಜಯಶ್ರೀ ಮಾಳಗಿ ಸೇರಿದಂತೆ ಇನ್ನಿತರರು ಇದ್ದರು.

ಇದನ್ನೂ ಇದಿ : ಕಾಂಗ್ರೆಸ್ ಪಕ್ಷ ಎಸ್​​ಡಿಪಿಐ ಮತ್ತು ಪಿಎಫ್ಐ ಕಪಿ ಮುಷ್ಟಿಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.