ಅಥಣಿ: ನೂತನ ಸಚಿವರಾದ ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ ಅವರಿಗೆ ನೀರಾವರಿ ಖಾತೆ ನೀಡಿದ್ದಕ್ಕೆ ಸಂತೋಷವಾಗಿದೆ. ಅಥಣಿ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಸಿಗುವ ನಿರೀಕ್ಷೆಯಲ್ಲಿದ್ದೇವೆ. ತಾಲೂಕಿನಲ್ಲಿ ಸವಳು-ಜವಳು ಅತಿ ಹೆಚ್ಚು ಇರುವುದರಿಂದ ಇದಕ್ಕೆ ವಿಶೇಷ ಆದ್ಯತೆ ನೀಡಿ ರೈತರಿಗೆ ಅನುಕೂಲವಾಗುವ ರೀತಿ ಕೆಲಸ ಮಾಡುವುದು ಹಾಗೂ ಕಕಮರಿ, ಕೊಟ್ಟಲಗಿ ಏತ ನೀರಾವರಿ ಯೋಜನೆ ಮೂಲಕ ಆಭಾಗದ ಜನರಿಗೆ ನೀರಿನ ಸೌಲಭ್ಯ ಒದಗಿಸುವುದು ಮೊದಲ ಕರ್ತವ್ಯ ಎಂದರು.
ಉತ್ತರ ಕರ್ನಾಟಕ ಭಾಗದವರೇ ಆದ ರಮೇಶ್ ಜಾರಕಿಹೊಳಿಗೆ ಅಥಣಿ ಮತಕ್ಷೇತ್ರದ ಮೇಲೆ ಕಾಳಜಿ ಇದೆ. ರಮೇಶ್ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ಕೊಟ್ಟಿರುವುದು ಸಂತಸ ತಂದಿದೆ ಎಂದರು.