ETV Bharat / state

ರಮೇಶ್ ಜಾರಕಿಹೊಳಿ ಮತ್ತೆ ಸಚಿವರಾಗಲಿದ್ದಾರೆ; ಶಾಸಕ ಕುಮಟಳ್ಳಿ ವಿಶ್ವಾಸ

ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣ ತನಿಖೆ ಹಂತದಲ್ಲಿದ್ದು, ಅವರನ್ನು ರಾಜಕೀಯವಾಗಿ ಹತ್ತಿಕ್ಕಲು ಷಡ್ಯಂತ್ರ ರೂಪಿಸಿದ್ದಾರೆ. ಈ ಆರೋಪದಿಂದ ಆದಷ್ಟು ಬೇಗನೆ ಹೊರಬರುತ್ತಾರೆ ಹಾಗೂ ಮತ್ತೆ ನೀರಾವರಿ ಸಚಿವರಾಗಿ ಅಥಣಿ ಬೃಹತ್ ನೀರಾವರಿ ಯೋಜನೆಗಳಿಗೆ ಚಾಲನೆ ನೀಡುತ್ತಾರೆಂದು ಶಾಸಕ ಮಹೇಶ್ ಕುಮಟಳ್ಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

mahesh-kumatalli
ಶಾಸಕ ಮಹೇಶ್ ಕುಮಟಳ್ಳಿ
author img

By

Published : Jun 24, 2021, 10:25 PM IST

Updated : Jun 24, 2021, 10:55 PM IST

ಅಥಣಿ: ರಮೇಶ್ ಜಾರಕಿಹೊಳಿ ಅವರು ಷಡ್ಯಂತ್ರಕ್ಕೆ ಬಲಿಯಾಗಿ ಅವರ ಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದು ಆದಷ್ಟು ಬೇಗನೆ ಆರೋಪ ಮುಕ್ತರಾಗುತ್ತಾರೆಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸದ್ಯ ರಾಸಲೀಲೆ ಪ್ರಕರಣ ತನಿಖೆ ಹಂತದಲ್ಲಿದ್ದು, ಅವರನ್ನು ರಾಜಕೀಯವಾಗಿ ಹತ್ತಿಕ್ಕಲು ಷಡ್ಯಂತ್ರ ರೂಪಿಸಿದ್ದಾರೆ. ಈ ಆರೋಪದಿಂದ ಆದಷ್ಟು ಬೇಗನೆ ಹೊರಬರುತ್ತಾರೆ ಹಾಗೂ ಮತ್ತೆ ನೀರಾವರಿ ಸಚಿವರಾಗಿ ಅಥಣಿ ಬೃಹತ್ ನೀರಾವರಿ ಯೋಜನೆಗಳಿಗೆ ಚಾಲನೆ ನೀಡುತ್ತಾರೆಂದು ತಿಳಿಸಿದರು.

ಶಾಸಕ ಮಹೇಶ್ ಕುಮಟಳ್ಳಿ ಮಾತನಾಡಿದರು

ತಾಲೂಕಿನಲ್ಲಿ ಮುಂಬರುವ ದಿನಗಳಲ್ಲಿ ಸವಳು ಜವಳು ಕಾಮಗಾರಿ ಪ್ರಾರಂಭಿಸಲಾಗುವುದೆಂದ ಅವರು, ಮಹಾರಾಷ್ಟ್ರ ಸರ್ಕಾರ ಜೊತೆಗೆ ಈಗಾಗಲೇ ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಒಪ್ಪಂದವನ್ನು ಮಾಡಲಾಗಿದೆ, ಆಲಮಟ್ಟಿ ಜಲಾಶಯ ಹಿನ್ನೀರಿನಿಂದ ಬೇಸಿಗೆ ಸಂದರ್ಭದಲ್ಲಿ ಮಹಾರಾಷ್ಟ್ರ ಜತ್ತ್ ತಾಲೂಕಿಗೆ ಎರಡು ಟಿಎಂಸಿ ನೀರು ಬಿಡಬೇಕು ಹಾಗೂ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನಾಲ್ಕು ಟಿಎಂಸಿ ನೀರು ಬಿಡಬೇಕು ತಿರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಪ್ರತಿ ವರ್ಷ ನದಿ ತೀರದ ರೈತರು ಸಂಕಷ್ಟ ಬಗೆಹರಿಯುತ್ತದೆ ಮತ್ತು ಅಮ್ಮಜೇಶ್ವರಿ ಏತ ನೀರಾವರಿ ಯೋಜನೆ ಆದಷ್ಟು ಬೇಗನೆ ಕಾರ್ಯ ರೂಪಕ್ಕೆ ಬರಲಿದೆ ಎಂದು ತಿಳಿಸಿದರು.

ಓದಿ: ನ್ಯಾಯಾಧಿಕರಣಗಳಿಗೂ Video Conference ಸೌಲಭ್ಯ ಕಲ್ಪಿಸಿ : ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ!

Last Updated : Jun 24, 2021, 10:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.