ಅಥಣಿ: ಕೊರೊನಾ ಸೋಂಕಿನ ಹಿನ್ನೆಲೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈಟಿವಿ ಭಾರತಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ ಅವರು, ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದಾಗಿ ತಿಳಿಸಿದರು.
ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿದ್ದು, ವೈದ್ಯರ ಸಲಹೆ ಮೇರೆಗೆ ಎರಡು ವಾರಗಳ ಕಾಲ ಮನೆಯಲ್ಲೇ ಚಿಕಿತ್ಸೆ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.
ಅಥಣಿ ಕ್ಷೇತ್ರದ ಜನರ ಹಾಗೂ ಶಿವಯೋಗಿಗಳ ಆಶೀರ್ವಾದದಿಂದ ಮಹಾಮಾರಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖ ಹೊಂದಿದ್ದೇನೆ. ಚಿಕಿತ್ಸೆ ಬಳಿಕ ಮತ್ತೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳತ್ತ ಗಮನ ನೀಡಲಾಗುತ್ತದೆ ಎಂದಿದ್ದಾರೆ.