ಬೆಳಗಾವಿ: ಆಸ್ಪತ್ರೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೇ ಶಂಕಿತರೇ ಸಾಯುತ್ತಾರೆ. ಅದಕ್ಕೆ ನಾವು ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಶಂಕಿತರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಆದರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಅವರ ಆರೋಗ್ಯವನ್ನು ಅವರೇ ಕಾಪಾಡಿಕೊಳ್ಳಬೇಕು ಎಂದರು.
ಪಾಸಿಟಿವ್ ಬರುವ ಮುಂಚೆ ಸಾಮೂಹಿಕ ಕ್ವಾರಂಟೈನ್‌ನಲ್ಲಿ ಅಂತರ ತುಂಬಾ ಮುಖ್ಯ. ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು, ವೈದ್ಯರು ಪದೇ, ಪದೆ ಜಾಗೃತಿ ಮೂಡಿಸುತ್ತಿದ್ದಾರೆ. ಇಷ್ಟೆಲ್ಲ ಹೇಳಿದರೂ ನಿಯಮ ಪಾಲಿಸದವರ ಜವಾಬ್ದಾರಿ ಯಾರು ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.