ETV Bharat / state

15 ದಿನಗಳವರೆಗೆ ಮಲಪ್ರಭಾ ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ - Malaprabha Project

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.

Malaprabha Irrigation Advisory Committee Meeting
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.
author img

By ETV Bharat Karnataka Team

Published : Sep 20, 2023, 7:39 PM IST

ಬೆಳಗಾವಿ: ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರದಿಂದ 15 ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಾವರಿಗಾಗಿ ಹಿತಾಸಕ್ತಿ ಹಾಗೂ ಕುಡಿಯುವ ನೀರು ಒದಗಿಸುವುದು ಈ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಸಲಹಾ ಸಮಿತಿಯ ನಿರ್ಧಾರ ಆಧರಿಸಿ ಅಧಿಕಾರಿಗಳು ಆದೇಶ ಮಾಡಲಿದ್ದಾರೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರದಿಂದ 15 ದಿನ ನೀರು ಹರಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ ಮಾತನಾಡಿ, ಮಳೆ ಕೊರತೆಯಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಆದ್ದರಿಂದ ಜನರಿಗೆ ತೊಂದರೆಯಾಗದಂತೆ ನೀರು ಬಿಡಬೇಕಿದೆ. ನೀರಾವರಿಗೆ ಅಗತ್ಯವಿರುವ ನೀರು ಮೀಸಲಿಟ್ಟುಕೊಂಡು ಅಗತ್ಯತೆ ಆಧರಿಸಿ ಕುಡಿಯುವ ನೀರು ಬಿಡುಗಡೆಗೊಳಿಸಬೇಕು. ಬರಗಾಲ ಎಂದು ಘೋಷಿಸಿರುವುದರಿಂದ ಪರಿಸ್ಥಿತಿ ಆಧರಿಸಿ ಕುಡಿಯುವ ಉದ್ದೇಶಕ್ಕಾಗಿಯೇ ಹಂತ ಹಂತವಾಗಿ ಬಿಡುಗಡೆಗೊಳಿಸಬಹುದು ಸಲಹೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಅಗತ್ಯ: ಸವದತ್ತಿ ಶಾಸಕ‌ ವಿಶ್ವಾಸ್ ವೈದ್ಯ ಮಾತನಾಡಿ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ತೀವ್ರವಾಗಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ. ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, "ಮುಂದಿನ ಜೂನ್ ತಿಂಗಳ ವರೆಗಿನ ಲೆಕ್ಕಾಚಾರ ಇಟ್ಟುಕೊಂಡು ಜಲಾಶಯ ನೀರು ನಿರ್ವಹಣೆಯನ್ನು ಮಾಡಬೇಕಿದೆ. ಆದ್ದರಿಂದ ಸಲಹಾ ಸಮಿತಿಯು ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಅಭಿಪ್ರಾಯ ತಿಳಿಸಿದರು.

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಎಂಜಿನಿಯರ್ ವಿ.ಎಸ್. ಮಧುಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ, ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂಓದಿ:ಕುಡಿಯುವ ನೀರಿಗಾಗಿ ಜೈಲಿಗೆ ಹೋಗಲೂ ರೆಡಿ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.