ಬೆಳಗಾವಿ: ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಮನೆಯಲ್ಲೇ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನ ಮಾಲು ಸಮೇತ ಹುಕ್ಕೇರಿ ಪೋಲಿಸರು ಬಂಧಿಸಿದ್ದಾರೆ.
ಆಲಮೇಲದ ಬಾಬುರಾವ್ ಲಾವಟೆ ಬಂಧಿತ ಆರೋಪಿ. ಈತ 20 ಸಾವಿರ ರೂ. ಮೌಲ್ಯದ 2 ಕೆ.ಜಿ.ಗಾಂಜಾ ಖರೀದಿಸಿ,ಅದನ್ನ ಮನೆಯಲ್ಲಿಟ್ಟು ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿಯೊಂದಿಗೆ ಸ್ಥಳಕ್ಕಾಮಿಸಿದ ಪೊಲೀಸರು ಆರೋಪಿಯನ್ನ ಬಂಧಿಸಿ, 20 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.