ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಮೂಲತಃ ಗೋಕಾಕ್ನ ಮಾಯಪ್ಪ ಲಿಂಗಪ್ಪ ಧನಗರ್(30) ಎಂದು ತಿಳಿದು ಬಂದಿದೆ. ಈ ಹಿಂದೆ ಕೊಲೆ ಕೇಸ್ನಲ್ಲಿ ಹಿಂಡಲಗಾ ಜೈಲು ಸೇರಿದ್ದನು.
ಆತ್ಮಹತ್ಯೆ ಮಾಡಿಕೊಂಡಿರುವ ಕೈದಿಯ ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವ ಕಾರಣ ಪ್ರಕರಣ ದಾಖಲಾಗಿದ್ದು, ಪ್ರಕರಣದ ವಿಚಾರಣೆ ನಡೆದ ನಂತರ ಮೃತದೇಹ ಸಂಬಂಧಿಕರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.