ಬೆಳಗಾವಿ: ಅಪರಿಚಿತ ವ್ಯಕ್ತಿಯೊಬ್ಬ ಇಲ್ಲಿನ ಮರಾಠ ಮಂದಿರದ ಬಳಿಯಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ನಗರದ ಮರಾಠ ಮಂದಿರದ ಬಳಿ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.