ಅಥಣಿ: ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಆಯ್ಕೆಯಾದ ಸತ್ತಿ ಗ್ರಾಮದ ಯುವಕ ನೇಣಿಗೆ ಶರಣಾಗಿದ್ದಾನೆ. ಅಥಣಿ ತಾಲೂಕಿನ ಸತ್ತಿ ಗ್ರಾಮದ ಬಸವರಾಜ ದುಂಡಪ್ಪ ಹಿಡಕಲ್ (24) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
ಪೊಲೀಸ್ ನೌಕರಿಗೆ ಆಯ್ಕೆಯಾಗಿರುವ ಯುವಕ ಮುಂದಿನ ತಿಂಗಳು ಬರಲಿರುವ ನೇಮಕಾತಿ ಪತ್ರಕ್ಕೆ ಕಾಯುತ್ತಿದ್ದ. ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮಂಡ್ಯ: ವಿದ್ಯುತ್ ತಂತಿ ತಗುಲಿ ಹೊತ್ತಿ ಉರಿದ ಲಾರಿ