ಬೆಳಗಾವಿ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕ್ಯಾಂಪ್ ನಿವಾಸಿ ಉತ್ಕರ್ಷ ಅಲಿಯಾಸ್ ಬಾಬು ವರ್ಮಾ, ಮಾದ್ವಾ ರಸ್ತೆಯ ನಿವಾಸಿ ಮಯೂರ್ ರಾಹುತ್ ಬಂಧಿತ ಆರೋಪಿಗಳು. ಇವರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 750 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.