ETV Bharat / state

ಬೆಳಗಾವಿಯಿಂದ ಬೆಂಗಳೂರಿನವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ - ಬೆಳಗಾವಿ ಪ್ರತಿಭಟನೆ ಸುದ್ದಿ

ಮಹದಾಯಿ ಯೋಜನೆ ಜಾರಿ ಹಾಗೂ ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಳಗಾವಿಯಿಂದ ಬೆಂಗಳೂರಿನವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಇಂದು ಚಾಲನೆ ನೀಡಲಾಯಿತು.

protest in Belagavi
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ
author img

By

Published : Feb 15, 2020, 7:08 PM IST

ಬೆಳಗಾವಿ: ಕನ್ನಡಿಗರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಇಂದಿನಿಂದ ಫೆ. 18ರವರೆಗೆ ಬೆಳಗಾವಿಯಿಂದ ಬೆಂಗಳೂರಿನವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಚಾಲನೆ ನೀಡಲಾಯಿತು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ರ‍್ಯಾಲಿ ಆರಂಭಕ್ಕೂ ಮುನ್ನ ನಗರದ ಚೆನ್ನಮ ಸರ್ಕಲ್​ನಲ್ಲಿ‌ ಚೆನ್ನಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಡಿಸಿ ಕಚೇರಿ ಮೂಲಕ ಪ್ರತಿಭಟನಾ ಮೆರವಣಿಗೆ ಸಾಗಿತು. ಮಹದಾಯಿ ಯೋಜನೆಯ ಜಾರಿ, ನೆರೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ, ಕಿತ್ತೂರು ಚೆನ್ನಮ್ಮ ಹೆಸರನ್ನು ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಬೇಕು. ಉತ್ತರ ಕರ್ನಾಟಕವನ್ನು ಸಂಪೂರ್ಣ ಅಭಿವೃದ್ಧಿ ಮಾಡಬೇಕು ಎಂದು‌ ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜ್ಯದಲ್ಲಿ ಕನ್ನಡಿಗರಿಗೆ ಎಲ್ಲಾ ಕ್ಷೇತ್ರದಲ್ಲಿಯೂ ಶೇ.80ರಷ್ಟು ಮೀಸಲಾತಿ ನೀಡಬೇಕು. ಪೊಲೀಸರಿಗೆ ಸಂಬಂಧಿಸಿದಂತೆ ಔರಾದ್ಕರ್ ವರದಿಯನ್ನು ಜಾರಿಗೊಳಿಸಬೇಕು. ಕರ್ನಾಟಕದಲ್ಲಿ ಶೇ.80ರಷ್ಟು ನಾಮಫಲಕಗಳು ಕನ್ನಡದಲ್ಲಿಯೇ ಇರಬೇಕು. ಡಾ.ಸರೋಜಿನಿ ಮಹಿಷಿ ವರದಿ, ಸಿದ್ದಗಂಗಾ ಡಾ.ಶಿವಕುಮಾರ ಸ್ವಾಮಿಜಿಗೆ ಭಾರತ ರತ್ನ ಪ್ರಶಸ್ತಿ, ಕಲ್ಯಾಣ ಕರ್ನಾಟಕ ಭಾಗಕ್ಕೆ 371ಜೆ ಕಾಯ್ದೆಯನ್ನು ಸಂಪೂರ್ಣ ಅನ್ವಯವಾಗುವಂತೆ ಜಾರಿಗೆ ತರಬೇಕು ಸೇರಿದಂತೆ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಜಾಥಾ ನಡೆಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.