ಚಿಕ್ಕೋಡಿ: ಮಾನಸಿಕ ಅಸ್ವಸ್ಥನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಹೆಬ್ಬಾಳ ಗ್ರಾಮದ ಚಂದ್ರಕಾಂತ ಕೆಂಪಣ್ಣಾ ಚೌಹಾಣ (25) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕಳೆದ ಆರು ತಿಂಗಳಿನಿಂದ ಮಾನಸಿಕವಾಗಿ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಕಾಂತ ತಮ್ಮ ಸ್ವಂತ ಮನೆಯ ಸ್ನಾನದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.