ಬೆಳಗಾವಿ: ಗಡಿ ಜಿಲ್ಲೆಯಲ್ಲಿ ಎಂಇಎಸ್, ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಆರಂಭಿಸಿದ್ದು, ಕಡಿಗೇಡಿಗಳು ನಾಡದ್ರೋಹಿ ಘೋಷಣೆ ಕೂಗಿ ಉದ್ಧಟತನ ಮೆರೆದಿದ್ದಾರೆ.
ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಲೇಬೇಕು ಎಂದು ಆಗ್ರಹಿಸಿದ್ದು, ಬೆಳಗಾವಿ ಮೇಲೆ ನಮ್ಮ ಹಕ್ಕಿದೆ ಎಂದು ಮರಾಠಿಯಲ್ಲಿ ಘೋಷಣೆ ಕೂಗಿದರು.
ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಸಂಭಾಜಿ ವೃತ್ತದಿಂದ ಪ್ರತಿಭಟನಾ ರ‍್ಯಾಲಿ ಆರಂಭವಾಗಿದ್ದು, ಡಿಸಿ ಕಚೇರಿವರೆಗೆ ತೆರಳಲು ತೀರ್ಮಾನಿಸಿವೆ. ಕೈಯಲ್ಲಿ ಭಗವಾಧ್ವಜ ಹಿಡಿದು ಪ್ರತಿಭಟನಾ ರ‍್ಯಾಲಿ ಮಾಡುತ್ತಿದ್ದಾರೆ.
ಓದಿ : ಮಹಿಳಾ ದಿನದಂದೇ ಯುವತಿ ಮೇಲೆ ಆ್ಯಸಿಡ್ ದಾಳಿ
ಎಂಇಎಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗಿಯಾಗಿದ್ದು, ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ತೆರವು ಮಾಡಿ, ಭಗವಾ ಧ್ವಜ ಅಳವಡಿಸುವಂತೆ ಪಟ್ಟು ಹಿಡಿದಿದ್ದಾರೆ.