ETV Bharat / state

ನಿಷೇಧದ ನಡುವೆ ಎಂಇಎಸ್ ಮುಖಂಡರ ಪ್ರತಿಭಟನೆ; ಗಡಿಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ

ನಿಷೇಧದ ನಡುವೆಯೇ ಎಂಇಎಸ್ ಮುಖಂಡರು ಬೆಳಗಾವಿಯ ಮತ್ತು ಮಹಾರಾಷ್ಟ್ರದ ಗಡಿ ಭಾಗ ಶಿನೊಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

MES leaders protest at the border amid ban

author img

By ETV Bharat Karnataka Team

Published : Dec 4, 2023, 4:28 PM IST

Updated : Dec 4, 2023, 5:16 PM IST

sw

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಈ ನಡುವೆ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘೋಷಣೆ ಕೂಗುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿನ ಹುತಾತ್ಮ ಸ್ಮಾರಕಕ್ಕೆ ಭೇಟಿ ನೀಡಿದ ಎಂಇಎಸ್ ನಾಯಕರು, ಗೌರವ ಸಲ್ಲಿಸಿದರು. ನಿಷೇಧಾಜ್ಞೆ ಹೇರಿದ್ದರಿಂದ ಕರ್ನಾಟಕದಲ್ಲಿ ಅನುಮತಿ ಸಿಗದ ಹಿನ್ನೆಲೆ ಮಹಾರಾಷ್ಟ್ರದ ಶಿನೊಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ಶಿನೊಳ್ಳಿಗೆ ತೆರಳುವ ಮುನ್ನ ಹುತಾತ್ಮರ ಸ್ಮಾರಕಕ್ಕೆ ಎಂಇಎಸ್ ನಾಯಕರು ಮಾಲಾರ್ಪಣೆ ಮಾಡಿದರು. ಬಳಿಕ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಇದ್ದರೆ ಮಹಾರಾಷ್ಟ್ರದಲ್ಲಿ ಇರುತ್ತೇವೆ, ಇಲ್ಲವೇ ಜೈಲಿನಲ್ಲಿ ಇರುತ್ತೇವೆ ಎಂದು ಘೋಷಣೆ ಕೂಗಿದರು. ಬೆರಳಣಿಕೆಯಷ್ಟು ಮಾತ್ರ ಎಂಇಎಸ್ ನಾಯಕರು ಭಾಗಿಯಾಗಿದ್ದು ಕಂಡು ಬಂದಿತು.

ಎಂಇಎಸ್‌ ಪ್ರತಿಭಟನೆಗೆ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣದ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದಲ್ಲಿ ಶಿವಸೇನೆ ಕಾರ್ಯಕರ್ತರು ಕೂಡ ಸೇರಿಕೊಂಡರು. ಶಿನೊಳ್ಳಿಯಿಂದ ಜೊತೆಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದ ಉಭಯ ಸಂಘಟನೆಯ ಮುಖಂಡರು, ಕರ್ನಾಟಕ ಸರ್ಕಾರ, ಮಹಾರಾಷ್ಟ್ರ ಸರ್ಕಾರ, ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ, ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್​ಗೆ ಅನುಮತಿ ನಿರಾಕರಣೆ : ಪೊಲೀಸ್ ಕಮೀಷ್​ನರ್ ಖಡಕ್ ಆದೇಶ

ಇನ್ನು ಮಹಾಮೇಳಾವ್ ಸಿದ್ಧತೆಯಲ್ಲಿದ್ದ ಎಂಇಎಸ್‌ಗೆ ಬೆಳಗಾವಿ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮಹಾಮೇಳಾವ್​ಗೆ ಅನುಮತಿ ನಿರಾಕರಿಸಿ ನಗರ ಪೊಲೀಸ್ ಆಯುಕ್ತ ಎಸ್‌ ಎನ್ ಸಿದ್ದರಾಮಪ್ಪ ಖಡಕ್ ಆದೇಶ ಹೊರಡಿಸಿದ್ದಾರೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರು, ಬೆಳಗಾವಿಯ ಮೂರು ಪ್ರಮುಖ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದಿದ್ದಾರೆ.

ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲೇಲೇ ಮೈದಾನ, ಕ್ಯಾಂಪ್ ಪೊಲೀಸ್ ಠಾಣೆಯ ಧರ್ಮವೀರ ಸಂಭಾಜಿ ಸರ್ಕಲ್, ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಾಜಿ ಉದ್ಯಾನವನದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿ. 4ರ ಬೆಳಗ್ಗೆ 6ರಿಂದ ಡಿ.5 ಸಂಜೆ 6ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Last Updated : Dec 4, 2023, 5:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.