ETV Bharat / state

ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣನ ಕೊಡುಗೆ ಅಪಾರ: ಸಚಿವ ಗೋವಿಂದ ಕಾರಜೋಳ - ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ

ಇಂದು ಬೆಳಗಾವಿಯಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳರವರು ಸ್ವಾತಂತ್ರ್ಯ ಹೋರಾಟದಲ್ಲಿ ರಾಯಣ್ಣನ ಕೊಡುಗೆಯನ್ನು ನೆನೆದರು..

Minister Govind Karjol spokes Rayanna contribution in freedom fight
ಸ್ವಾತಂತ್ರ್ಯ ಹೋರಾಟಕ್ಕೆ ರಾಯಣ್ಣನ ಕೊಡುಗೆ ಬಗ್ಗೆ ಕಾರಜೋಳ ಭಾಷಣ
author img

By

Published : Jan 26, 2022, 7:45 PM IST

ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ದೇಶಕ್ಕೆ ರಾಯಣ್ಣನ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ನಗರದ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಿತ್ತೂರು ಸಂಸ್ಥಾನದ ರಕ್ಷಣೆಗೆ ನಿಂತ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕಾಗಿ ಅವರ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ದೇಶದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಅನೇಕ ಮಹನೀಯರು ಪ್ರಾಣತ್ಯಾಗ ಮಾಡಿದ್ದು, ಅದರಲ್ಲಿ ರಾಯಣ್ಣ ಪಾತ್ರ ಬಹಳ ಮಹತ್ವದಾಗಿದೆ ಎಂದರು.

Minister Govind Karjol spokes Rayanna contribution in freedom fight
ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿದ ಸಚಿವರು

ಕಿತ್ತೂರು ನಾಡನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಸಂಗೊಳ್ಳಿ ರಾಯಣ್ಣನಿಗೆ ಸಲ್ಲುತ್ತದೆ. ನಾಡಿಗೆ ರಾಯಣ್ಣನ ಕೊಡುಗೆ ಅಪಾರವಾಗಿದ್ದು, ಭವಿಷ್ಯದಲ್ಲಿ ಎಲ್ಲಾ ಯುವ ಪೀಳಿಗೆಯಲ್ಲಿ ರಾಯಣ್ಣನ ನೆನಪು ಶಾಶ್ವತವಾಗಿ ಉಳಿಯಲಿದೆ ಎಂದರು.

ಇದನ್ನೂ ಓದಿ: ಜನ ಹುಚ್ಚ ಅಂತಾ ಹಿಯಾಳಿಸಿದರೂ ಹಿಂಜರಿಯದ ಭೂಪ​: ಗದಗದ ಕೃಷಿ ಯಂತ್ರ ಸಾಧಕನಿಗೆ 'ಪದ್ಮಶ್ರೀ' ಗರಿ

ರಾಯಣ್ಣನ ಹೆಸರು, ಜನ್ಮದಿನ ಹಾಗೂ ಹುತಾತ್ಮ ದಿನಾಚರಣೆಗೆ ಮಾತ್ರ ಸೀಮಿತವಲ್ಲ. ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರದಲ್ಲೇ ಸೈನಿಕ ಶಾಲೆ ಲೋಕಾರ್ಪಣೆ ಮಾಡಲಿದ್ದಾರೆ. ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆ ಯುವಪೀಳಿಗೆಯ ಪ್ರೇರಣೆ ಮತ್ತು ಶಕ್ತಿಯಾಗಿದೆ ಎಂದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.