ಅಥಣಿ: ಖಾತೆ ಹಂಚಿಕೆ ಬಗ್ಗೆ ಯಾವುದೇ ಸಚಿವರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಇಂದು ಸಚಿವರು ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸತ್ತಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿ ಭಾಗಕ್ಕೆ ಮಂಜೂರು ಮಾಡಿದ ನೀರಾವರಿ ಯೋಜನೆಗಳ ಬಗ್ಗೆ ನಾನು ಬೆಂಗಳೂರಿಗೆ ಹೊದ ನಂತರ ಪರಿಶೀಲನೆ ಮಾಡುತ್ತೇನೆ ಎಂದರು.
ಅಸಮಾಧಾನ ಇಲ್ಲ :
ಸಂಪುಟ ಖಾತೆ ಹಂಚಿಕೆ ಬಗ್ಗೆ ಕೆಲವು ಸಚಿವರು ಬಹಿರಂಗವಾಗಿ ಸಮಾಧಾನ ಹೊರಹಾಕಿರುವ ಕುರಿತಂತೆ ಪ್ರತಿಕ್ರಿಯಿಸಿ, ಸಚಿವರಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.
ಚೆಕ್ಫೋಸ್ಟ್ನಲ್ಲಿ ಕಟ್ಟೆಚ್ಚರ :
ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಗಡಿ ಗ್ರಾಮಗಳು ಹಾಗೂ ಚೆಕ್ಫೋಸ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಈಗಾಗಲೇ ಅನುಸರಿಸುತ್ತಿದೆ ಎಂದು ತಿಳಿಸಿದರು.
ಓದಿ: ಮಾಜಿ ಸಿಎಂ ಬಿಎಸ್ವೈಗೆ ಸಂಪುಟ ದರ್ಜೆಯ ಸೌಲಭ್ಯ ಒದಗಿಸಿ ಆದೇಶ
ತಾವು ಸಾಗುತ್ತಿರುವ ರಸ್ತೆಯಲ್ಲಿ ಕಾರು ನಿಲ್ಲಿಸಿ ಸಚಿವರು ನೆರೆ ಸಂತ್ರಸ್ತರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರು ನೆರೆ ಬಾಧಿತ ಗ್ರಾಮಗಳಿಗೆ ಶಾಶ್ವತ ಪರಿಹಾರ ಹಾಗೂ ಯಾರೂ ಪರಿಹಾರದಿಂದ ವಂಚಿತರಾಗದಂತೆ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.