ETV Bharat / state

ಸ್ಪೀಕರ್ ಸ್ಥಾನದ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ವಿಚಾರ: ವಿಧಾನಸಭೆಯಲ್ಲಿ ಕೋಲಾಹಲ - ಈಟಿವಿ ಭಾರತ್ ಕನ್ನಡ

ಸ್ಪೀಕರ್ ಸ್ಥಾನದ ಕುರಿತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿರುವ ಹೇಳಿಕೆ ಇಂದು ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ಸ್ಪೀಕರ್ ಯು ಟಿ ಖಾದರ್
ಸ್ಪೀಕರ್ ಯು ಟಿ ಖಾದರ್
author img

By ETV Bharat Karnataka Team

Published : Dec 11, 2023, 3:34 PM IST

ಬೆಳಗಾವಿ/ ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸ್ಪೀಕರ್ ಸ್ಥಾನದ ಕುರಿತು ಹೇಳಿರುವ ವಿವಾದಾತ್ಮಕ ಹೇಳಿಕೆ ವಿಧಾನಸಭೆಯಲ್ಲಿ ಇಂದು ಕೋಲಾಹಲಕ್ಕೆ ಕಾರಣವಾಯಿತು. ಸದನ ಇಂದು ಬೆಳಗ್ಗೆ ಸಮಾವೇಶಗೊಂಡಾಗ ಸ್ಪೀಕರ್ ಯು ಟಿ ಖಾದರ್ ಅವರು ಪ್ರಶ್ನೋತ್ತರ ಆರಂಭಿಸಿದರು. ಆಗ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮುಂದಾದಾಗ, ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಜಮೀರ್ ಅಹಮ್ಮದ್ ಖಾನ್ ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿದ್ದಾರೆ. ಅವರು ರಾಜ್ಯದ ಜನರ ಭಾವನೆ ಕೆದಕಿದ್ದಾರೆ. ಅವರಿಗೆ ಮಾತನಾಡಲು ಅವಕಾಶ ಕೊಡಲ್ಲ. ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿದ್ದಾರೆ. ಅವರನ್ನು ವಜಾ ಮಾಡಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಈ ವೇಳೆ, ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಪ್ರತಿಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ನಾವೇನು ಗುಲಾಮರಾ? ಎಂದು ವಾಗ್ದಾಳಿ ನಡೆಸಿದರು. ಅಶೋಕ್ ಮಾತಿಗೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯರು ಹಾಗೂ ಜೆಡಿಎಸ್ ಸದಸ್ಯರು ವಾಗ್ದಾಳಿ ನಡೆಸಿದರು. ಸ್ಪೀಕರ್ ಸ್ಥಾನಕ್ಕೆ ಜಮೀರ್ ಅಗೌರವ ತಂದಿದ್ದಾರೆ ಎಂದು ಡಾ. ಸಿ. ಎನ್. ಅಶ್ವತ್ಥ್​ ನಾರಾಯಣ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಬಿಜೆಪಿ ‌ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ಉಂಟಾಯಿತು. ಬಿಜೆಪಿ ಸದಸ್ಯರ ನಡೆಗೆ ಸಚಿವ ಕೃಷ್ಣ ಬೈರೇಗೌಡ ಆಕ್ಷೇಪ ವ್ಯಕ್ತಪಡಿಸಿ, ನೋಟಿಸ್ ಕೊಟ್ಟು ಮಾತನಾಡಲಿ, ಪ್ರಶ್ನೋತ್ತರ ‌ಅವಧಿಯಲ್ಲಿ ಈ‌ ರೀತಿ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಗದ್ದಲ ಹಿನ್ನೆಲೆಯಲ್ಲಿ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದ ಸ್ಪೀಕರ್ ಯು. ಟಿ ಖಾದರ್ ಅವರು, ಅವರ ಕೊಠಡಿಯಲ್ಲಿ ಸಂಧಾನ ಸಭೆ ಕರೆದರು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಸಚಿವ ಎಚ್. ಕೆ ಪಾಟೀಲ್, ಮಾಜಿ ಸಚಿವರಾದ ಅಶ್ವತ್ಥನಾರಾಯಣ, ಆರಗ ಜ್ಞಾನೇಂದ್ರ ಮತ್ತಿತರರು ಭಾಗವಹಿಸಿದ್ದರು.

ಸಂಧಾನ ಸಭೆ ವಿಫಲ, ಧರಣಿ : ಈ ಬಗ್ಗೆ ಸ್ಪೀಕರ್ ಕರೆದಿದ್ದ ಸಂಧಾನಸಭೆ ವಿಫಲವಾಯಿತು. ಮತ್ತೆ ಸದನ ಸೇರಿದಾಗ ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ಧರಣಿ ನಡೆಸಿದರು. ಸದನದಲ್ಲಿ ಬಿಜೆಪಿ ಸದಸ್ಯರಿಂದ ಜಮೀರ್ ವಿರುದ್ಧ ವಾಗ್ದಾಳಿ ಮುಂದುವರೆದಿದ್ದು, ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಗೆ ಆರ್. ಅಶೋಕ್ ಒತ್ತಾಯಿಸಿದರು.

ಇದು ಭಾರತ, ಹಿಂದೂಸ್ಥಾನ. ಒಂದು ಧರ್ಮದ ಪರವಾಗಿ ಜಮೀರ್ ಮಾತನಾಡಬಾರದು. ನಮ್ಮನ್ನು ಕೀಳರಿಮೆಯಿಂದ ನೋಡಲು ಅವರಿಗೆ ಅವಕಾಶ ಯಾರು ಕೊಟ್ಟರು. ಜಮೀರ್ ವಜಾ ಮಾಡಬೇಕು ಎಂದು ಆರ್.‌ ಅಶೋಕ್ ಆಗ್ರಹಿಸಿದರು. ಪ್ರಶ್ನೋತ್ತರ ಹಾಗೂ ಉತ್ತರ ಕರ್ನಾಟಕ ಮತ್ತು ಬರ ಚರ್ಚೆಗೆ ಅವಕಾಶ ಮಾಡಿಕೊಡಿ ಎಂದು ಸ್ಪೀಕರ್ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಬಿಜೆಪಿ ಸದಸ್ಯರ ಧರಣಿ ನಡುವೆ ಸ್ಪೀಕರ್ ಪ್ರಶ್ನೋತ್ತರ ಮುಗಿಸಿದರು. ಬಿಜೆಪಿ ಸದಸ್ಯರ ಧರಣಿ ಮುಂದುವರೆಯಿತು. ಈ ವೇಳೆ ಸ್ಪೀಕರ್ ಮಾತನಾಡಿ, ಉತ್ತರ ಕರ್ನಾಟಕ ಹಾಗೂ ಬರಗಾಲ ಮುಖ್ಯನಾ? ಅಥವಾ ಸಚಿವರ ಮಾತು ಮುಖ್ಯನಾ? ಎಂದು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

ಇದನ್ನೂ ಓದಿ: ರೈತರಿಗೆ 2 ಲಕ್ಷ ರೂ.ವರೆಗೆ ಸಾಲಮನ್ನಾ, ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ: ಆರ್‌.ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.