ETV Bharat / state

ಮಾನವ ಕುಲ ತಲೆ ತಗ್ಗಿಸುವ ಕೃತ್ಯವಿದು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮಹಿಳೆ ಮೇಲಿನ ಹಲ್ಲೆ ಅಮಾನವೀಯ ಹೇಯಕೃತ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
author img

By ETV Bharat Karnataka Team

Published : Dec 11, 2023, 6:06 PM IST

Updated : Dec 12, 2023, 5:51 PM IST

ಬೆಳಗಾವಿ : ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.

ಸಂತ್ರಸ್ತ ಮಹಿಳೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಧೈರ್ಯ ಹೇಳಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಹೇಯಕೃತ್ಯ. ಇಡೀ ಸಮಾಜವೇ ತಲೆತಗ್ಗಿಸುವ ಘಟನೆ. ಇಂತಹ ಘಟನೆಗಳು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಈಗಾಗಲೇ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದರು.

ಸಂತ್ರಸ್ತ ಮಹಿಳೆ ಹೆದರಿಕೊಂಡಿದ್ದಾರೆ : ಇಂತಹ ಘಟನೆ ನನ್ನ ಜಿಲ್ಲೆಯಲ್ಲಾಗಿದ್ದು, ನಾನು ತಲೆತಗ್ಗಿಸುವಂತಹ ಘಟನೆ. ಆರೋಪಿಗಳಿಗೆ ಶಿಕ್ಷೆಯಾಗಲು ನಾನು ಕೂಡಾ ಹೋಮ್ ಮಿನಿಸ್ಟರ್‌ಗೆ ಮನವಿ ಮಾಡುತ್ತೇನೆ. ಘಟನೆಯಿಂದಾಗಿ ಸಂತ್ರಸ್ತ ಮಹಿಳೆ ಹೆದರಿಕೊಂಡಿದ್ದಾರೆ. ಹೆಣ್ಮಕ್ಕಳಿಗೆ ಮರ್ಯಾದೆ ಪ್ರಶ್ನೆ ಬಂದಾಗ ಸಹಜವಾಗಿಯೇ ಹೆದರುತ್ತಾರೆ. ಅವರ ಜತೆಗೆ ನಮ್ಮ ಸರ್ಕಾರ ಹಾಗೂ ನಾನಿದ್ದೇನೆ ಎಂದು ಧೈರ್ಯ ಹೇಳಿದ್ದೇನೆ. ಇನ್ಮೇಲೆ ಇಂತಹ ಘಟನೆಗಳು ಜರುಗದಂತೆ ನೋಡಿಕೊಳ್ಳಲು 'ಸಖಿ ಒನ್' ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದರು.

ಏನಿದು ಘಟನೆ ? : ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನ ಕೃತ್ಯ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿಯ ಮೇಲೆ ಯುವತಿಯ ಕುಟುಂಬಸ್ಥರು ದೌರ್ಜನ್ಯ ಮೆರೆದಿದ್ದಾರೆ. 42 ವರ್ಷ ವಯಸ್ಸಿನ ಮಹಿಳೆ ಹಲ್ಲೆಗೆ ಒಳಗಾದವರು. ಕಂಬಕ್ಕೆ ಕಟ್ಟಿ ಬೆತ್ತಲೆ ಮಾಡಿ ಕೀಚಕರು ಅಮಾನವೀಯವಾಗಿ ವರ್ತಿಸಿದ್ದಾರೆ.

ಯುವತಿಗೆ ಇಂದು ನಿಶ್ಚಯವಾಗಿದ್ದ ನಿಶ್ಚಿತಾರ್ಥ : ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ನಿನ್ನೆ ರಾತ್ರಿ ಮನೆ ಬಿಟ್ಟು ಈ ಪ್ರೇಮಿಗಳು ಓಡಿ ಹೋಗಿದ್ದಾರೆ. ಯುವತಿಗೆ ಬೇರೆ ವರನನ್ನು ನೋಡಿದ್ದು, ಇಂದು ನಿಶ್ಚಿತಾರ್ಥ ಹಮ್ಮಿಕೊಳ್ಳಲಾಗಿತ್ತು. ಮದುವೆಯನ್ನು ಸಹ ಕುಟುಂಬಸ್ಥರು ನಿಗದಿ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ದಾಳಿ ಮಾಡಿ, ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ.

ಇದನ್ನೂ ಓದಿ: ಮಗನ 'ಪ್ರೀತಿ', ತಾಯಿಗೆ ಶಿಕ್ಷೆ; ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ

Last Updated : Dec 12, 2023, 5:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.