ETV Bharat / state

ಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲರ ಸೇರ್ಪಡೆಗೆ ಸರ್ಕಾರ ಬದ್ಧ: ಸಚಿವ ಮಾಧುಸ್ವಾಮಿ - ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡದ ಜಾತಿಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ‌. ಈ ಕುರಿತು ಮುಖ್ಯಮಂತ್ರಿಯವರು ನವದೆಹಲಿಗೆ ತೆರಳಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಸಚಿವ ಜೆ.ಸಿ‌.ಮಾಧುಸ್ವಾಮಿ ಸದನಕ್ಕೆ ತಿಳಿಸಿದರು.

Minister Madhuswami on inclusion of Kadugolla in st
ಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲರ ಸೇರ್ಪಡೆಗೆ ರಾಜ್ಯ ಸರ್ಕಾರ ಬದ್ಧ:ಸಚಿವ ಮಾಧುಸ್ವಾಮಿ.
author img

By

Published : Dec 27, 2022, 6:12 PM IST

ಬೆಳಗಾವಿ: ಕುರಿ ಕಾಯುವ ವೃತ್ತಿಯಲ್ಲಿರುವ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡದ ಜಾತಿಗಳ ಪಟ್ಟಿಗೆ ಸೇರಿಸಲು ಸರ್ಕಾರ ಉತ್ಸುಕವಾಗಿದೆ. ಈ ಕುರಿತು ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಸಚಿವರನ್ನು ಭೇಟಿಯಾಗಿ ಚರ್ಚಿಸಲು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ ಎಂದು ಕಾನೂನು ಸಚಿವ ಜೆ.ಸಿ‌.ಮಾಧುಸ್ವಾಮಿ ಹೇಳಿದರು.

ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿ ಸಚಿವರು, ಈ ಮೊದಲು ಹಿಂದುಳಿದ ಬುಡಕಟ್ಟು (ಬಿಟಿ) ಗಳ ಪಟ್ಟಿಯಲ್ಲಿದ್ದ ಕಾಡುಗೊಲ್ಲ ಹಾಗೂ ವಾಲ್ಮೀಕಿನಾಯಕ ಜಾತಿಗಳ ಪೈಕಿ ವಾಲ್ಮೀಕಿನಾಯಕರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದಾಗ ಕಾಡುಗೊಲ್ಲರನ್ನು ಪ್ರವರ್ಗ 1 ರಲ್ಲಿ ಮುಂದುವರೆಸಲಾಯಿತು ಎಂದರು.

ನಂತರ ಮಾತನಾಡಿ, ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಅಗತ್ಯವಿದ್ದ ಕುಲಶಾಸ್ತ್ರ ಅಧ್ಯಯನ ಕೈಗೊಳ್ಳಲು ಮಾನವಶಾಸ್ತ್ರಜ್ಞರಾದ ಅನ್ನಪೂರ್ಣಮ್ಮ ನೇತೃತ್ವದ ಸಮಿತಿ ರಚಿಸಲಾಯಿತು. ಅವರು ನೀಡಿದ ವರದಿ ಆಧರಿಸಿ 2014 ರಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಯಿತು. ಕುಲಶಾಸ್ತ್ರ ಅಧ್ಯಯನದ ಕೆಲವು ಅಂಶಗಳಲ್ಲಿ ಕಾಡುಗೊಲ್ಲರ ಕೆಲವು ಆಚರಣೆಗಳು ಎಸ್​ಟಿಗೆ ಸೇರ್ಪಡೆ ಮಾಡಲು ಪೂರಕವಾಗಿಲ್ಲ ಎಂದು ಕೇಂದ್ರ ಕೆಲವು ಸ್ಪಷ್ಟನೆಗಳನ್ನು ಕೇಳಿತ್ತು ಎಂದು ತಿಳಿಸಿದರು.

ಬುಡಕಟ್ಟು ಸಂಶೋಧನಾ ಸಂಸ್ಥೆಯ ಮೂಲಕ ಸ್ಪಷ್ಟನೆಗಳನ್ನು ಪಡೆದು ಕೇಂದ್ರಕ್ಕೆ ಕಳುಹಿಸಲಾಗಿದೆ. ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮುಖ್ಯಮಂತ್ರಿಯವರು ನವದೆಹಲಿಗೆ ತೆರಳಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ಬದ್ಧತೆ ಹೊಂದಿದೆ ಎಂದರು.

ಶಾಸಕಿ ಪೂರ್ಣಿಮಾ ಮಾತನಾಡಿ, ಕಳೆದ ತಿಂಗಳು ದೆಹಲಿಗೆ ತೆರಳಿದ್ದ ಸಮಾಜದ ನಿಯೋಗಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಸಹಕಾರದಿಂದ ಕೇಂದ್ರ ಸರ್ಕಾರದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಈ ವಿಷಯದಲ್ಲಿ ರಾಜ್ಯ ಸರ್ಕಾರ ಶಿಫಾರಸು ಮಾಡಿದರೆ ಸಾಲದು, ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಕೋಲಾರ ಚಿನ್ನದ ಗಣಿ ಹೊಣೆಗಾರಿಕೆ ಸರ್ಕಾರದ ವಶಕ್ಕೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ: ನಿರಾಣಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.