ETV Bharat / state

ಮೈಸೂರು ಕಾಗದ ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ: ಸಚಿವ ಎಂ ಬಿ ಪಾಟೀಲ್ - etv bharat kannada

ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ ಪುನರ್ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

minister-mb-patil-reaction-on-bhadravathi-mysore-paper-factory-reopen
ಮೈಸೂರು ಕಾಗದ ಕಾರ್ಖಾನೆ ಪುನರಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ: ಸಚಿವ ಎಂ ಬಿ ಪಾಟೀಲ್
author img

By ETV Bharat Karnataka Team

Published : Dec 12, 2023, 6:56 PM IST

ಬೆಂಗಳೂರು: ಭದ್ರಾವತಿಯಲ್ಲಿರುವ ಮೈಸೂರು ಕಾಗದ ಕಾರ್ಖಾನೆಯ ಪುನಾರಂಭಕ್ಕೆ ಸರ್ಕಾರವು ಸಕಾರಾತ್ಮಕವಾಗಿ ಚಿಂತನೆ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಇಂದು ವಿಧಾನ ಪರಿಷತ್‌ನಲ್ಲಿ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಎಸ್ ರುದ್ರೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಕಾಗದ ಕಾರ್ಖಾನೆಯು ತೀವ್ರ ತರಹದ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದ್ದ ಕಾರಣ ಎಲ್ಲಾ ಉತ್ಪಾದನಾ ಘಟಕಗಳನ್ನು 21-11-2015 ರಿಂದ ಸ್ಥಗಿತಗೊಳಿಸಿದ್ದು, ಜೂನ್ 2023 ಅಂತ್ಯಕ್ಕೆ ಒಟ್ಟು ಸಂಚಿತ ನಷ್ಟ 1482 ಕೋಟಿ ರೂ ಆಗಿದೆ ಎಂದು ತಿಳಿಸಿದರು.

"ಸರ್ಕಾರವು ಕಾರ್ಖಾನೆಯ ಪುನರುಜ್ಜೀವನ ಸಾಧ್ಯವಿಲ್ಲವೆಂದು ತೀರ್ಮಾನಿಸಿ, ಕಾರ್ಖಾನೆಯ ಕಾರ್ಯಚಟುವಟಿಕೆಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದಲ್ಲಿ ನೀಡಬೇಕೆಂದು ತೀರ್ಮಾನ ಕೈಗೊಂಡು, ಈ ಪ್ರಕ್ರಿಯೆಗಳಿಗೆ ಮೆ ಐಡೆಕ್‌ನ ಸೇವೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಆರ್‌ಎಫ್​ಕ್ಯೂ ಅನ್ನು ಏಪ್ರಿಲ್ 2017, ಆಗಸ್ಟ್ 2018 ಹಾಗೂ ಮಾರ್ಚ್ 2019 ರಲ್ಲಿ ಪ್ರಕಟಿಸಲಾಗಿತ್ತು. ಆರ್‌ಎಫ್​ಕ್ಯೂಗೆ ಯಾವುದೇ ಅರ್ಜಿ ಸ್ವೀಕೃತವಾಗಿರುವುದಿಲ್ಲ" ಎಂದರು.

"ಆರ್‌ಎಫ್‌ಕ್ಯೂ ಅನ್ನು ಕಂಪನಿಯು ಮೊದಲೇ ಅಪ್‌ಲೋಡ್ ಮಾಡಲಾಗಿದ್ದು, ಆರ್‌ಎಫ್‌ಕ್ಯೂಗಾಗಿ ಪ್ರಚಾರವನ್ನು ಈಗಾಗಲೇ ವ್ಯಾಪಕ ನೀಡಲಾಗಿರುವುದರಿಂದ ಪ್ರಸ್ತಾವನೆಗಾಗಿ ವಿನಂತಿಯನ್ನು (ಆರ್‌ಎಫ್‌ಪಿ) ನೇರವಾಗಿ 2020ರ ನವೆಂಬರ್ 25 ರಂದು ಅಪ್‌ಲೋಡ್ ಮಾಡಲಾಗಿದ್ದು, ಇ-ಟೆಂಡರ್ ತೆರೆದಾಗ ಯಾವುದೇ ಸ್ವೀಕೃತವಾಗಿರುವುದಿಲ್ಲ. ನಿರೀಕ್ಷಿತ ಬಿಡ್ಡುದಾರರು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಹಾಗೂ ಯಾವುದೇ ಹೊಣೆಗಾರಿಕೆಗಳಿಲ್ಲದ ಕಂಪೆನಿಯ ಕಾರ್ಯಾಚರಣೆಗಳನ್ನು ನಡೆಸಲು ಬಯಸಿರುತ್ತಾರೆ. ಅದರಂತೆ, ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಮತ್ತು ಬಾಕಿ ಉಳಿದಿರುವ 1,102 ಕೋಟಿಗಳ ಹೊಣೆಗಾರಿಕೆಗಳ ಕುರಿತು ಸರ್ಕಾರವು ತೀರ್ಮಾನ ತೆಗೆದು ಕೊಳ್ಳಬೇಕಾಗಿರುತ್ತದೆ" ಎಂದು ವಿವರಿಸಿದರು.

"2023ರ ಸೆಪ್ಟಂಬರ್ 7ರಂದು ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ಣಯದಂತೆ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ 2023ರ ನವೆಂಬರ್ 17ರಂದು ಸಭೆ ನಡೆಸಲಾಗಿದ್ದು, ಅದರಂತೆ ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ನೀಡುವ ಸಂಬಂಧ ಪರಿಶೀಲಿಸಿ ವರದಿ ನೀಡಬೇಕಾಗಿದೆ. ಕಂಪನಿಯ ಸಾಲಗಳು/ಬಾಕಿಗಳ ಕುರಿತು ಆರ್ಥಿಕ ಇಲಾಖೆಯೊಡನೆ ಸಮಾಲೋಚಿಸಲಾಗುತ್ತಿದೆ" ಎಂದರು.

"ಕಾರ್ಖಾನೆಯ ಭೂ ಪ್ರದೇಶವನ್ನು ಮೈಸೂರು ಕಾಗದ ಕಾರ್ಖಾನೆಯು ಸಂರಕ್ಷಿಸಿದ್ದು, ನಿರೀಕ್ಷಿತ ಬಿಡ್ಡುದಾರರು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಹಾಗೂ ಯಾವುದೇ ಹೊಣೆಗಾರಿಕೆಗಳಿಲ್ಲದ ಕಂಪನಿಯ ಕಾರ್ಯಾಚರಣೆಗಳನ್ನು ನಡೆಸಲು ಬಯಸುವುದರಿಂದ, ಅದರಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ತದನಂತರ ಕಾರ್ಖಾನೆಯನ್ನು ಪುನರ್ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ" ಎಂದು ತಿಳಿಸಿದರು.

ಇದನ್ನೂ ಓದಿ: ಏತ ನೀರಾವರಿ ಯೋಜನೆಗಳ ದುರಸ್ತಿ ಕಾರ್ಯ‌ ಶೀಘ್ರ ಪೂರ್ಣ: ಡಿಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.