ETV Bharat / state

ಯೋಗವನ್ನು ಜೀವನದಲ್ಲಿ ರೂಢಿಸಿಕೊಳ್ಳಿ: ಸಚಿವ ರಮೇಶ್ ಜಾರಕಿಹೊಳಿ‌ ಕರೆ

author img

By

Published : Oct 20, 2020, 9:07 AM IST

ಸಾಂಕ್ರಾಮಿಕ ಕೋವಿಡ್ ಸೋಂಕು ಉಲ್ಬಣಿಸುತ್ತಿರುವ ಈ ಸಂದರ್ಭದಲ್ಲಿ ಇಂದಿನ‌ ಯುವ ಜನರು ತಮ್ಮ ಆರೋಗ್ಯ ರಕ್ಷಣೆಗೆ ಪ್ರಥಮ ಆದ್ಯತೆ ಕೊಡಬೇಕು ಎಂದು ಸಚಿವ ರಮೇಶ್​ ಜಾರಕಿಹೊಳಿ‌ ಹೇಳಿದರು.

exercise equipment distributed
ವ್ಯಾಯಾಮ ಪರಿಕರಗಳನ್ನು ವಿತರಿಸಿದ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯ ಗೋಕಾಕ್​​ ತಾಲೂಕಿನ ವಿವಿಧ ಗ್ರಾಮಗಳ ಯುವಕರಿಗೆ ತಮ್ಮ ಕ್ಷೇತ್ರ ಅಭಿವೃದ್ಧಿ ಅನುದಾನದಲ್ಲಿ ವ್ಯಾಯಾಮ ಪರಿಕರಗಳನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು, ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕು. ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದಾರೆ.

ಸಾಂಕ್ರಾಮಿಕ ಕೋವಿಡ್ ಸೋಂಕು ಉಲ್ಬಣಿಸುತ್ತಿರುವ ಈ ಸಂದರ್ಭದಲ್ಲಿ ಇಂದಿನ‌ ಯುವ ಜನರು ತಮ್ಮ ಆರೋಗ್ಯ ರಕ್ಷಣೆಗೆ ಪ್ರಥಮ ಆದ್ಯತೆ ಕೊಡಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.