ETV Bharat / state

ಅತಿವೃಷ್ಟಿ ಬಗ್ಗೆ ಮುನ್ನೆಚ್ಚರಿಕೆ ಇರಲಿ, ಕೋವಿಡ್ ನಿರ್ಲಕ್ಷಿಸಬೇಡಿ: ಅಧಿಕಾರಿಗಳಿಗೆ ಸಚಿವ ಜಾರಕಿಹೊಳಿ ಸೂಚನೆ - ಕೃಷ್ಣಾ ನದಿ

ಕೃಷ್ಣಾ ನದಿಯಲ್ಲಿ ನೀರಿನ ಹರಿವು 2.30 ಲಕ್ಷ ಕ್ಯೂಸೆಕ್ ಗಿಂತ ಅಧಿಕಗೊಂಡಾಗ ಮಾತ್ರ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಇಂದು ಮಳೆ ಕಡಿಮೆಯಾಗಿರುವುದರಿಂದ ಯಾವುದೇ ತೊಂದರೆಯಿಲ್ಲ.ಈ ಹಿಂದೆ ಪ್ರವಾಹದಿಂದ ಮನೆಗಳ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣವೇ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

belagavi
ಸಚಿವ ಜಾರಕಿಹೊಳಿ
author img

By

Published : Oct 16, 2020, 9:22 PM IST

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆಯ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅತಿವೃಷ್ಟಿ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷ್ಣಾ ನದಿಯಲ್ಲಿ ನೀರಿನ ಹರಿವು 2.30 ಲಕ್ಷ ಕ್ಯೂಸೆಕ್ ಗಿಂತ ಅಧಿಕಗೊಂಡಾಗ ಮಾತ್ರ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಇಂದು ಮಳೆ ಕಡಿಮೆಯಾಗಿರುವುದರಿಂದ ಯಾವುದೇ ತೊಂದರೆಯಿಲ್ಲ. ಈ ಹಿಂದೆ ಪ್ರವಾಹದಿಂದ ಮನೆಗಳ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣವೇ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವೈದ್ಯಕೀಯ ಸೌಲಭ್ಯ ಒದಗಿಸಲು ಸೂಚನೆ:

ಜಿಲ್ಲೆಯಲ್ಲಿ ಆಕ್ಸಿಜನ್ ಮತ್ತು ವೆಂಟಿಲೇಟರ್ ಸೌಲಭ್ಯಗಳ ಲಭ್ಯತೆಯ ಮಾಹಿತಿಯನ್ನು ಪಡೆದುಕೊಂಡ ಸಚಿವ ಜಾರಕಿಹೊಳಿ, ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲ ತಾಲ್ಲೂಕು ಸ್ಥಳಗಳಲ್ಲೂ ಅಗತ್ಯ ವೈದ್ಯಕೀಯ ಸೌಲಭ್ಯ ಲಭಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಕಳೆದ ಎರಡು ಮೂರು ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣದಲ್ಲಿ ಇಳಿಮುಖವಾಗಿದೆ. ಆದರೆ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಸೌಲಭ್ಯ ಹೊಂದಿರುವ ಬೆಡ್ ಗಳು ಸೇರಿದಂತೆ ಯಾವುದೇ ರೀತಿಯ ಕೊರತೆಯಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ತಿಳಿಸಿದರು. ಪ್ರತಿದಿನ ಸಾವಿರಕ್ಕಿಂತ ಅಧಿಕ ಪರೀಕ್ಷೆ ಮಾಡಲಾಗುತ್ತಿದ್ದು, ಸೋಂಕಿನ ಪ್ರಮಾಣದಲ್ಲಿ ಇಳಿಮುಖವಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ. ವಿನಯ್ ದಾಸ್ತಿಕೊಪ್ಪ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.