ETV Bharat / state

ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ ಸಚಿವ ರಮೇಶ್​​ ಜಾರಕಿಹೊಳಿ

author img

By

Published : Oct 27, 2020, 7:14 PM IST

ಉಸ್ತುವಾರಿ ಸಚಿವ ರಮೇಶ್​​ ಎರಡು ಗಂಟೆಗಳ ಕಾಲ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ನಾಗರಿಕರ ಕುಂದುಕೊರತೆ, ಸಮಸ್ಯೆಗಳ ಅಹವಾಲು ಸ್ವೀಕರಿಸಿದರು.

Minister Ramesh jarakiholi listened to the grievances of the public
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ ಸಚಿವ ರಮೇಶ್​​ ಜಾರಕಿಹೊಳಿ

ಬೆಳಗಾವಿ : ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ಪರಿಹರಿಸುವ ಕಾರ್ಯಕ್ಕೆ ಮುಂದಾದರು.

ಬೆಂಗಳೂರಿಗೆ ಹೋಗಬೇಕಾಗಿದ್ದ ಬೆಳಗಾವಿ ಉಸ್ತುವಾರಿ ಸಚಿವ ರಮೇಶ್​​ ಎರಡು ಗಂಟೆಗಳ ಕಾಲ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ನಾಗರಿಕರ ಕುಂದುಕೊರತೆ, ಸಮಸ್ಯೆಗಳ ಅಹವಾಲು ಸ್ವೀಕರಿಸಿದರು. ಈ ವೇಳೆ ವಿವಿಧ ತಾಲೂಕು,ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು ಆಶ್ರಯ ಮನೆಗಳು, ರಸ್ತೆ ಸಂಪರ್ಕ, ಕುಡಿಯುವ ನೀರು, ನೀರಾವರಿ ಸೌಲಭ್ಯ ಕಲ್ಪಿಸುವುದು, ಕಾಲುವೆ ಸೋರುವಿಕೆ,ಒಳಚರಂಡಿ ವ್ಯವಸ್ಥೆ, ದೇವಸ್ಥಾನ, ಸಮುದಾಯ ಭವನ ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಸಚಿವರಿಗೆ ಮನವಿ ಸಲ್ಲಿಸಿದರು.

ಕೆಲವೊಂದ ಗಂಭೀರ ವಿಷಯಗಳಿಗೆ ಸಚಿವ ರಮೇಶ ತಕ್ಷಣವೇ ಸಂಬಂಧಿಸಿ ಅಧಿಕಾರಿಗಳನ್ನು ದೂರವಾಣಿಯಲ್ಲಿಯೇ ಸಂಪರ್ಕಿಸಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾದ್ರೆ ಕೆಲವೊಂದು‌ ಸಮಸ್ಯೆಗಳಿಗೆ ಅಧಿಕಾರಿಗಳನ್ನು ಕರೆದು ತಕ್ಷಣವೇ ಪರಿಹಾರ ನಿವಾರಿಸುವಂತೆ ಸೂಚಿಸಿದರು.ಇದೇ ವೇಳೆ ನೂರಾರು ಸಂಖ್ಯೆಯಲ್ಲಿ ಬಂದಿರುವ ಸಚಿವರ ಅಭಿಮಾನಿಗಳು ಹೂಹಾರ ಹಾಕಿ‌ ಸನ್ಮಾನಿಸಿ ಗೌರವಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.