ETV Bharat / state

ಕೊರೊನಾ ತಡೆಗೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಸಚಿವ ರಮೇಶ್ ಜಾರಕಿಹೊಳಿ - ಅಧಿಕಾರಿಗಳ ಜತೆ ಸಚಿವ ರಮೇಶ್ ಜಾರಕಿಹೊಳಿ ಸಭೆ

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಜತೆ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದರು.

Ramesh jarkiholi meeting
ಸಚಿವ ರಮೇಶ್ ಜಾರಕಿಹೊಳಿ ಸೂಚನೆ
author img

By

Published : Apr 5, 2020, 6:16 PM IST

ಬೆಳಗಾವಿ: ಜಿಲ್ಲೆಯಲ್ಲಿ ಮೂರು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ಲಾಕ್​ಡೌನ್ ಅನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮತ್ತು ತುರ್ತು ಸಂದರ್ಭ ಹೊರತುಪಡಿಸಿ ಜನಸಂಚಾರ ನಿಯಂತ್ರಣಕ್ಕೆ ಬಿಗಿ ಕ್ರಮಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Ramesh jarkiholi meeting
ಸಚಿವ ರಮೇಶ್ ಜಾರಕಿಹೊಳಿ ಸಭೆ

ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಜತೆ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದರು. ಈ ಹಿಂದೆ ಕೊರೊನಾ ನೆಗೆಟಿವ್ ಬಂದಿರುವವರಿಗೆ ಕೆಲ ದಿನಗಳ ಬಳಿಕ ಮತ್ತೊಮ್ಮೆ ಕಡ್ಡಾಯವಾಗಿ ಪರಿಶೀಲಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಅದೇ ರೀತಿ ನಗರ ಪ್ರದೇಶಗಳಲ್ಲಿ ಕೂಡ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಔಷಧ ಸಾಮಗ್ರಿಗಳ ಲಭ್ಯತೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಸಚಿವ ರಮೇಶ್ ಜಾರಕಿಹೊಳಿ, ನಗರದ ಹೊರ ವಲಯದಲ್ಲಿ ನಾಲ್ಕು ದಿಕ್ಕುಗಳಲ್ಲಿ ಹೋಲ್​​ ಸೇಲ್ ತರಕಾರಿ ಮಾರುಕಟ್ಟೆ ಸ್ಥಾಪನೆ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಚರ್ಚೆ ನಡೆಸಿದರು.

ರಾಯಬಾಗ, ಚಿಕ್ಕೋಡಿ, ಕುಡಚಿ ಸೇರಿದಂತೆ ವಿವಿಧ ಕಡೆಯ ಮಾಹಿತಿಯನ್ನು ಪಡೆದುಕೊಂಡರು. ಜಿಲ್ಲೆಯ ಎಲ್ಲ ಭಾಗಗಳ ಮೇಲೆ ನಿಗಾ ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು. ಕಾನೂನು ಸುವ್ಯವಸ್ಥೆ ಪಾಲನೆ ಕುರಿತು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸಚಿವರಿಗೆ ಮಾಹಿತಿಯನ್ನು ನೀಡಿದರು.

ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.