ETV Bharat / state

ಲಾಕ್​​ಡೌನ್ ಅವಧಿ ಮೇ.3ರವರೆಗೆ‌ ವಿಸ್ತರಣೆ.. ಸಚಿವ ರಮೇಶ್​ ಜಾರಕಿಹೊಳಿ ಸ್ವಾಗತ

author img

By

Published : Apr 14, 2020, 4:14 PM IST

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಪ್ರಧಾನಿ ಲಾಕ್​ಡೌನ್​ ವಿಸ್ತರಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಸಚಿವ ರಮೇಶ್​ ಜಾರಕಿಹೊಳಿ ತಿಳಿಸಿದ್ದಾರೆ.

Minister_Ramesh_Jarakiholi_Press_Release
ರಮೇಶ್​ ಜಾರಕಿಹೊಳಿ

ಬೆಳಗಾವಿ : ಎಲ್ಲೆಡೆ ಮಹಾಮಾರಿಯಾಗಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ‌ ಮೋದಿಯವರು ಲಾಕ್‌ಡೌನ್ ಅವಧಿ ಮೇ.3ರವರೆಗೆ‌ ವಿಸ್ತರಣೆ ಮಾಡಿರುವುದನ್ನು‌ ನಾನು ಮುಕ್ತಕಂಠದಿಂದ ಸ್ವಾಗತಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವಿಶ್ವವ್ಯಾಪಿಯಾಗಿರುವ ಕೊರೊನಾ ವೈರಸ್ ನಿರ್ಮೂಲನೆ ಮಾಡುವುದೇ ನಮ್ಮ ಧ್ಯೇಯ. ಪ್ರಪಂಚದ ಬಹುದೊಡ್ಡ ದೇಶಗಳೇ ಇಂದು‌ ಕೋವಿಡ್-19 ಸೋಂಕಿನಿಂದ ತತ್ತರಿಸಿರುವಾಗ ನಾವು ಕೇಂದ್ರ ಸರ್ಕಾರ ರೂಪಿಸುವ ನಿಯಮಗಳನ್ನು‌ ಪಾಲಿಸಿ ಸೋಂಕು ಮುಕ್ತ ಸಮಾಜ ನಿರ್ಮಿಸಲು ಶ್ರಮವಹಿಸಬೇಕಾಗಿದೆ ಎಂದಿದ್ದಾರೆ. ಆರೋಗ್ಯ ಸೇತು ಮೊಬೈಲ್ ಆ್ಯಪ್​​​​ ಡೌನ್​​​​​ಲೋಡ್ ಮಾಡಿಕೊಳ್ಳುವಂತೆ ಅರಿವು ಮೂಡಿಸೋಣ.‌ ಸೋಂಕು ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್‌ಗಳನ್ನು ಗೌರವಿಸೋಣ ಎಂದು ಇದೇ ವೇಳೆ ಸಚಿವರು ಹೇಳಿದ್ದಾರೆ.

ದಿನನಿತ್ಯದ ಜೀವನಕ್ಕೆ ಅವಶ್ಯಕವಾದ ‌ವಸ್ತುಗಳು ಸಿಗುವಂತೆ ನಮ್ಮ ಸರ್ಕಾರವು ಕ್ರಮ ತೆಗೆದುಕೊಂಡಿದೆ. ವೈರಸ್ ತಡೆಗೆ ಎಲ್ಲರೂ ಸಾಮಾಜಿಕ ‌ಅಂತರ ಕಾಯ್ದುಕೊಂಡು, ಮನೆಯಲ್ಲಿಯೇ ಇದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಮೂಲಕ ಕೊರೊನಾ ಸೋಂಕು ಹರಡುವಿಕೆ ತಡೆಯೋಣ ಎಂದು ರಮೇಶ ಜಾರಕಿಹೊಳಿ‌ ‌ತಿಳಿಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.