ETV Bharat / state

ಮಾಸ್ಕ್ ಧರಿಸದ ಯೋಧನ ಬಂಧನ; ಸಚಿವ ‌ಜಾರಕಿಹೊಳಿ ಖಂಡನೆ

ಚಿಕ್ಕೋಡಿಯಲ್ಲಿ ಪೇದೆ ಹಾಗೂ ಯೋಧನ ನಡುನೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಲಸಂಪನ್ಮೂಲ ಸಚಿವ ರಮೇಶ್ ‌ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

The arrest of warrior: Minister Ramesh Jarakiholi reaction
ಜಲಸಂಪನ್ಮೂಲ ಸಚಿವ ರಮೇಶ್ ‌ಜಾರಕಿಹೊಳಿ
author img

By

Published : Apr 27, 2020, 6:20 PM IST

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ನಗರದಲ್ಲಿ ‌ತನ್ನ ಮನೆಯ ಮುಂದೆ ವಾಹನ ತೊಳೆಯುತ್ತಿದ್ದ ಅರೆ ಸೈನಿಕ ಪಡೆಯ ಯೋಧನನ್ನು ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಬಂಧಿಸಿರುವ ಪೊಲೀಸರ ಕ್ರಮವನ್ನು ಜಲಸಂಪನ್ಮೂಲ ಸಚಿವ ರಮೇಶ ‌ಜಾರಕಿಹೊಳಿ ಖಂಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಕೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ. ಒಬ್ಬ ನಿರಪರಾಧಿ ಯೋಧನನ್ನು ಅತ್ಯಂತ ಅಮಾನುಷವಾಗಿ ಹಿಂಸಿಸಿ, ಬಂಧಿಸಿರುವುದು ಸಮವಸ್ತ್ರ ಧರಿಸಿದ ಸೈನಿಕರಿಗೆ ಮಾಡಿದ ಅವಮಾನ.

ಕೂಡಲೇ ಬಂಧಿತ ಅರೆ ಸೈನಿಕ ಪಡೆಯ ಯೋಧನನ್ನು ಗೌರವದಿಂದ ಬಿಡುಗಡೆ ಮಾಡಬೇಕು ಮತ್ತು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ಮೇಲೆ ತನಿಖೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.